Breaking News

ಗಾಂಧಿ ಸಾಕ್ಷಿ ಕಾಯಕ 2.0 ತಂತ್ರಾಂಶವನ್ನು ಲೋಕಾರ್ಪಣೆಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯಾಭಿವೃದ್ಧಿ ನಿಗಮ (ಕೆಆರ್‌ಐಡಿಎಲ್) ನಿರ್ವಹಿಸುವ ಕಾಮಗಾರಿಗಳ ಪ್ರಗತಿಯ ಸಂಪೂರ್ಣ ಮಾಹಿತಿಗಳು, ಕಾಮಗಾರಿಗಳನ್ನು ವಹಿಸುವ ಇಲಾಖೆಗಳಿಂದ ಬಿಡುಗಡೆಯಾಗುವ ಅನುದಾನದ ಸ್ವೀಕೃತಿ ಹಾಗೂ ಬಳಕೆ, ಸೂಕ್ತ ರೀತಿಯಲ್ಲಿ ಲೆಕ್ಕಪತ್ರಗಳ ನಿರ್ವಹಣೆ ಮುಂತಾದ ವಿವಿಧ ಅಂಶಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಅನುಕೂಲವಾಗುವಂತೆ ಗಾಂಧಿ ಸಾಕ್ಷಿ ಕಾಯಕ 2.0 (ವರ್ಕ್ ಮಾನಿಟರಿಂಗ್ ಸಿಸ್ಟಂ) ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದ್ದು ಗಾಂಧಿ ಜಯಂತಿ ದಿನದಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಲೋಕಾರ್ಪಣೆಗೊಳಿಸಿದರು.
ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯಾಭಿವೃದ್ಧಿ ನಿಗಮ (ಕೆಆರ್‌ಐಡಿಎಲ್) ಕರ್ನಾಟಕ ಸರ್ಕಾರದ ಅಂಗಸಂಸ್ಥೆಯಾಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ನಿರ್ಮಾಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಈ ಸಂಸ್ಥೆಯು ರಾಜ್ಯಾದ್ಯಂತ ತನ್ನ ಜಾಲವನ್ನು ಹೊಂದಿದ್ದು, ಸರ್ಕಾರದ ವತಿಯಿಂದ ಕೈಗೊಳ್ಳಲಾಗುವ ನಿರ್ಮಾಣ ಯೋಜನೆಗಳು ಹಾಗೂ ವಿವಿಧ ಇಲಾಖೆಗಳು ವಹಿಸುವ ಕಟ್ಟಡಗಳು, ರಸ್ತೆ ಅಭಿವೃದ್ಧಿ ಮೊದಲಾದ ಕಾಮಗಾರಿಗಳನ್ನು ಕಳೆದ 51 ವರ್ಷಗಳಿಂದ ನಿಗದಿತ ಕಾಲಾವಧಿಯಲ್ಲಿ ಉತ್ತಮ ಗುಣಮಟ್ಟದಿಂದ ಅನುಷ್ಠಾನಗೊಳಿಸುತ್ತಿದೆ.
ಕೆಆರ್‌ಐಡಿಎಲ್ ಸಂಸ್ಥೆಯ ವಹಿವಾಟನ್ನು ಪಾರದರ್ಶಕಗೊಳಿಸುವ ನಿಟ್ಟಿನಲ್ಲಿ ಸೂಕ್ತ ತಂತ್ರಾಂಶದ ಅವಶ್ಯಕತೆ ಇದ್ದ ಕಾರಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಈ ತಂತ್ರಾಂಶ ಸೌಲಭ್ಯವನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಈ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *