Breaking News

52 ಕೇಂದ್ರಗಳಲ್ಲಿ ಪಿಎಸ್‌ಐ ನೇಮಕಾತಿ ಪರೀಕ್ಷೆ ಬರೆದ ಅಭ್ಯರ್ಥಿಗಳು

ಧಾರವಾಡ: ಪಿಎಸ್‌ಐ ನೇಮಕಾತಿ ಪರೀಕ್ಷೆಗಳು ಆರಂಭಗೊಂಡಿದ್ದು, ಧಾರವಾಡದ ಒಟ್ಟು 52 ಕೇಂದ್ರಗಳಲ್ಲಿ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

52 ಪರೀಕ್ಷಾ ಕೇಂದ್ರದ ಸುತ್ತ ಭಾರೀ ಭದ್ರತೆ ಒದಗಿಸಲಾಗಿದೆ.ಅಭ್ಯರ್ಥಿಗಳನ್ನು ಭದ್ರತಾ ಸಿಬ್ಬಂದಿ ಇಂಚಿಂಚು ಪರಿಶೀಲನೆ ನಡೆಸಿ ಪರೀಕ್ಷಾ ಕೇಂದ್ರದ ಒಳಗಡೆ ಬಿಟ್ಟಿದ್ದಾರೆ. 10-30ಕ್ಕೆ ಆರಂಭವಾದ ಪರೀಕ್ಷೆ ಮಧ್ಯಾಹ್ನ 2-30ಕ್ಕೆ ಪೂರ್ಣಗೊಳ್ಳಲಿದೆ. ಪರೀಕ್ಷಾ ಕೇಂದ್ರಕ್ಕೆ ಫ್ಯಾನ್ಸಿ ಸ್ಯಾಂಡಲ್ ಹಾಕಿಕೊಂಡು ಬಂದ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದ ಸಿಬ್ಬಂದಿ ಒಳಗಡೆ ಬಿಟ್ಟಿಲ್ಲ. ಫ್ಯಾನ್ಸಿ ಸ್ಯಾಂಡಲ್‌ಗಳನ್ನು ಹೊರಗಡೆಯೇ ಬಿಟ್ಟು ಹೋಗುವಂತೆ ಸೂಚಿಸಿದ್ದರಿಂದ ಅಭ್ಯರ್ಥಿಗಳು ಅವುಗಳನ್ನು ಹೊರಗಡೆಯೇ ಬಿಟ್ಟು ಪರೀಕ್ಷಾ ಕೇಂದ್ರದ ಒಳಗಡೆ ಹೋಗಿದ್ದಾರೆ.

Share News

About Shaikh BigTv

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *