Breaking News

ಪಿಎಂ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

ಶಿವಮೊಗ್ಗ : ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ ಸಾಲಿಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ಸೌಲಭ್ಯ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೀನು ಕೃಷಿ ಕೊಳಗಳ ನಿರ್ಮಾಣ ಒಟ್ಟು 5.33 ಹೆಕ್ಟೆರರ್ ಗಳು, ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯ ಸಾಂಪ್ರದಾಯಿಕ ಮೀನುಗಾರಿಕೆಗೆ ಎಫ್ರ್ಪಿ ಬದಲಿ ದೋಣಿ ನಿರ್ಮಾಣಕ್ಕಾಗಿ ಸಹಾಯ ಘಟಕಕ-01 (ಸಾಮಾನ್ಯ 01), ಮೀನು ಮರಿ ಪಾಲನಾ ಘಟಕ ನಿರ್ಮಾಣದ ಸಹಾಯ ಒಟ್ಟು 7.10 ಹೆಕ್ಟೇರ್ ಗುರಿ ಇದ್ದು ಸಾಮಾನ್ಯ 03, ಮಹಿಳೆ 02, ಮತ್ತು ಪರಿಶಿಷ್ಡ ಪಂಗಡ 2.10 ಹೆಕ್ಷೇರ್, ಸೈಕಲ್ ವಿತ್ ಐಸ್ ಬಾಕ್ಸ್ ಸಾಮಾನ್ಯ ವರ್ಗಕ್ಕೆ 01 ಗುರಿ ಹಾಗೂ ಹೊಸದಾದ ಮೀನುಮಾರಾಟ ಕಿಯೋಸ್ಕ್ ನಿರ್ಮಾಣಕ್ಕಾಗಿ ಅಲಂಕಾರಿಕ ಮೀನು ಮಾರಾಟ ಮಳಿಗೆ ಪರಿಶಿಷ್ಟ ಜಾತಿ 01 ಗುರಿ ನೀಡಲಾಗಿದೆ.
ಸಹಾಯಧನ ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. 40 ರಷ್ಟು ಹಾಗೂ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಮಹಿಳಾ ಫಲಾನುಭವಿಗಳಿಗೆ ಶೇ. 60 ರಷ್ಟು ಸಹಾಯಧನ ನೀಡಲಾಗುವುದು.
ಆಸಕ್ತರು ನಿಗದಿತ ನಮೂನೆಯ ಅರ್ಜಿಯನ್ನು ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅ.10 ರೊಳಗಾಗಿ ಸಂಬಂಧಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಪೂರ್ಣ ದಾಖಲೆಗಳೊಂದಿಗೆ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *