Breaking News

ಹರಿಯಾಣದಲ್ಲಿ ಚುನಾವಣಾ ಎಕ್ಸಿಟ್ ಪೋಲ್ ಸಮೀಕ್ಷೆ ಪ್ರಸಾರಕ್ಕೆ ಮಾಧ್ಯಮಗಳಿಗೆ ಚುನಾವಣಾ ಆಯೋಗ ಕಟ್ಟುನಿಟ್ಟಿನ ನಿರ್ಬಂಧ

ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆ 2024ಗೆ ಎರಡೇ ದಿನ ಬಾಕಿ ಇದೆ ಈ ಮಧ್ಯೆ ಕೇಂದ್ರ ಚುನಾವಣಾ ಆಯೋಗವು ಚುನಾವಣೋತ್ತರ ಸಮೀಕ್ಷೆಯನ್ನು ಪ್ರಸಾರ ಮಾಡದಂತೆ ಪತ್ರಿಕಾ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ನಿರ್ಬಂಧವನ್ನು ವಿಸ್ತರಣೆ ಮಾಡಿ ಆದೇಶಿಸಿದೆ.
ಹರಿಯಾಣದಲ್ಲಿ ಚುನಾವಣೆಗೆ ಎಕ್ಸಿಟ್ ಪೋಲ್ ಸಮೀಕ್ಷೆ ಪ್ರಸಾರಕ್ಕೆ ಚುನಾವಣೆ ಆಯೋಗ ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸಿದೆ. ಎಲ್ಲ ವಿಧದ ಸುದ್ದಿ ಮಾಧ್ಯಮಗಳು ಪ್ರಸಾರ ಮಾಡದಂತೆ ಕಳೆದ ತಿಂಗಳ ಸೆಪ್ಟೆಂಬರ್ 18 ಬೆಳಗ್ಗೆ 7:00 ಗಂಟೆಯಿಂದ ಮತದಾನ ದಿನವಾದ ಅಕ್ಟೋಬರ್ 05ರಂದು ಸಂಜೆ 6.30ರವರೆಗೆ ಈ ನಿರ್ಬಂಧ ಮುಂದುವರಿಯಲಿದೆ ಎಂದು ಹರಿಯಾಣ ಮುಖ್ಯ ಚುನಾವಣಾ ಅಧಿಕಾರಿ ಪಂಕಜ್ ಅಗರವಾಲ್ ತಿಳಿಸಿದ್ದಾರೆ.
ಈ ಮೂಲಕ ಜಮ್ಮು ಹಾಗೂ ಕಾಶ್ಮೀರ ಹಾಗೂ ಹರಿಯಾಣ ರಾಜ್ಯ ಅಸೆಂಬ್ಲಿ ಚುನಾವಣೆ ಪ್ರಕ್ರಿಯೆ, ಮತದಾನ, ಫಲಿತಾಂಶಗಳ ಒಂದಷ್ಟು ಖಚಿತ ಮಾಹಿತಿ ಸಂಗ್ರಹಿಸುವ ಗುರಿ ಹಾಕಿಕೊಂಡಿದೆ. ಆದ್ದರಿಂದಲೇ ಚುನಾವಣೊತ್ತರ ಸಮೀಕ್ಷೆಯನ್ನು ಪ್ರಸಾರ ಮಾಡದಂತೆ ಪ್ರಾತಿನಿಧ್ಯ ಕಾಯಿದೆ, 1951 ರ ಸೆಕ್ಷನ್-126 ಎ ಅಡಿಯಲ್ಲಿ ನಿಷೇಧ ಹೇರಿದೆ.
ಇನ್ನೂ ಮತದಾನದ ದಿನದಂದು ಮತದಾನ ಸಂಜೆ ಪೂರ್ಣಗೊಳ್ಳುತ್ತದೆ. ಅದು ಮುಗಿದು 30 ನಿಮಿಷಗಳ ವರೆಗೆ ಯಾವುದೇ ಚುನಾವಣೋತ್ತರ ಸಮೀಕ್ಷೆ ಬಿಡುಗಡೆ ಮಾಡದಂತೆ, ಪ್ರಕಟಿಸಿದಂತೆ ಸೂಚನೆ ನೀಡಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *