ವಿಜಯಪುರ: 2024-25ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮತ್ತು ಸಾಮಾನ್ಯ ವರ್ಗದ ರೈತರಿಗೆ 5 ಹೆಕ್ಟೆರ್ ಪ್ರದೇಶದ ವರೆಗೆ ಸಹಾಯಧನ ನೀಡಲು ಅವಕಾಶವಿದ್ದು, ಮೊದಲನೇ 2 ಹೆಕ್ಟೆರ್ ವರೆಗೆ ಶೇ 90 ರಷ್ಟು ಹಾಗೂ 2 ಹೆಕ್ಟೆರ್ ಮೇಲ್ಪಟ್ಟು 5 ಹೆಕ್ಟೆರ್ ವರೆಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಶೇ 45ರಷ್ಟು ಸಹಾಯಧನ ಪಡೆದುಕೊಳ್ಳಲು ಅವಕಾಶ ವಿರುತ್ತದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರು ಈ ಹಿಂದೆ ಅಳವಡಿಸಿಕೊಂಡಿದ್ದ ಸೂಕ್ಷ ನೀರಾವರಿ ಘಟಕ ಹಾಳಾಗಿದ್ದಲ್ಲಿ ಅಥವಾ ಕಾರ್ಯ ನಿರ್ವಹಿಸದೇ ಇದ್ದಲ್ಲಿ 7 ವರ್ಷಗಳ ನಂತರ ಅದೇ ಜಮೀನಿಗೆ ಮತ್ತೊಮ್ಮೆ ಸೂಕ್ಷ್ಮ ನೀರಾವರಿ ಪದ್ಧತಿ ಅಳವಡಿಸಿಕೊಂಡಲ್ಲಿ ಸಹಾಯಧನ ಪಡೆದುಕೊಳ್ಳಲು ಅವಕಾಶವಿರುತ್ತದೆ.
ರೈತರು ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿಜಯಪುರ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

