ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ರೈತರ ಆದಾಯವನ್ನು ಸುಧಾರಿಸುವುದು ಮತ್ತು ಮಧ್ಯಮ ವರ್ಗದವರಿಗೆ ಆಹಾರ ಭದ್ರತೆಯನ್ನು ಕಾಪಾಡುವುದು ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಪ್ರಧಾನಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆ ಮತ್ತು ಕೃಷೋನ್ನತಿ ಯೋಜನೆ ಗಳ ಅನುಷ್ಠಾನಕ್ಕೆ ಅದುನಿರ್ಧರಿಸಿದ್ದು, ರೈತರ ಆದಾಯ ಹೆಚ್ಚಳ ಮತ್ತು ಆಹಾರ ಭದ್ರತೆಗೆ 1,01,321 ಕೋಟಿ ರೂ.ಗಳ ಬಜೆಟ್ ಅನ್ನು ನಿಗದಿಪಡಿಸಿದೆ.
ಈ ಉಪಕ್ರಮಗಳು ಕೃಷಿ ಉತ್ಪಾದಕತೆ, ಸಾವಯವ ಕೃಷಿ, ಮಣ್ಣಿನ ಆರೋಗ್ಯ ಮತ್ತು ಸುಧಾರಿತ ಕೃಷಿ ತಂತ್ರಗಳನ್ನು ಒತ್ತಿ ಹೇಳುತ್ತವೆ. ಇದರಿಂದ ಆಹಾರ ಉತ್ಪಾದನೆ ಹೆಚ್ಚಳ ಆಗಿ ಜನರಿಗೆ ಆಹಾರ ಭದ್ರತೆ ಸಿಗುತ್ತದೆ ಎಂದು ಸರ್ಕಾರ ಹೇಳಿದೆ. ಪಿಎಂ ಕೃಷಿ ವಿಕಾಸ ಯೋಜನೆ ಇದರ ಅಡಿ ಮಣ್ಣಿನ ಆರೋಗ್ಯ ಮತ್ತು ಫಲವತ್ತತೆ, ಮಳೆಯಾಧಾರಿತ ಪ್ರದೇಶ ಅಭಿವೃದ್ಧಿ ಮತ್ತು ಕೃಷಿ ಯಾಂತ್ರೀಕರಣದಂತಹ ವಿವಿಧ ಕ್ರಮಗಳ ಮೂಲಕ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವತ್ತ ಗಮನ ಹರಿಸಲಾಗಿದೆ. ಸಾವಯವ ಕೃಷಿ ಹಾಗೂ ತಂತ್ರಜ್ಞಾನ ಅಧರಿತ ಕೃಷಿಗೆ ಆದ್ಯತೆ ನೀಡಿ ರೈತರ ಆದಾಯ ಹೆಚ್ಚಳಕ್ಕೆ ಕ್ರಮ ಜರುಗಿಸಲಾಗುತ್ತದೆ ಎನ್ನಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

