ರಾಯಚೂರು : ಮುಡಾ ತನಿಖೆಯ ಟೆನ್ಷನ್ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 4 ಹಾಗೂ 5 ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅ.4ರಂದು ವಿಶೇಷ ವಿಮಾನದ ಮೂಲಕ ಮೈಸೂರಿನಿಂದ ಕೊಪ್ಪಳದ ಗಿಣಿಗೇರಾ ಏರ್‌ಸ್ಟ್ರಿಪ್‌ಗೆ ಸಿಎಂ ಆಗಮಿಸಿದ್ದಾರೆ.
ಅಲ್ಲಿಂದ ಮಧ್ಯಾಹ್ನ 12.15ಕ್ಕೆ ಸಿಂಧನೂರಿಗೆ ಬಂದು ದಸರಾ ಮಹೋತ್ಸವ, ಕಲ್ಯಾಣ ಸೌಹಾರ್ಧ ನಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ನಂತರ ಸಿಂಧನೂರಿನಿಂದ ಕಲ್ಮಲಾ ಜಂಕ್ಷನ್ ವರೆಗೆ ₹ 1635 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಗೊರೆಬಾಳ ಕ್ಯಾಂಪ್‌ನಿಂದ ಗಾಂಧಿನಗರ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆಯನ್ನ ಸಿಎಂ ನೆರವೇರಿಸಲಿದ್ದಾರೆ. ರಾತ್ರಿ 9 ಗಂಟೆಗೆ ಸಿಂಧನೂರಿಂದ ರಾಯಚೂರಿಗೆ ಬಂದು ಸಿಎಂ ವಾಸ್ತವ್ಯ ಮಾಡಲಿದ್ದಾರೆ.
ಅ.5ರಂದು ಬೆಳಿಗ್ಗೆ 10 ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಜಿಲ್ಲಾಡಳಿತದ ವತಿಯಿಂದ ಇಲ್ಲಿಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಿರುವ ಕರ್ನಾಟಕ ಸಂಭ್ರಮ-50 ಕಾರ್ಯಕ್ರಮದಲ್ಲಿ ಸಿಎಂ ಸಿದ್ದು ಪಾಲ್ಗೊಳ್ಳಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

