Breaking News

ಬಸ್ಸಿನಲ್ಲಿ ಬಿಟ್ಟು ಹೋದ ಬ್ಯಾಗ್ ಮರಳಿಸಿ ಮಾನವೀಯತೆ ಮೆರೆದ ಚಾಲಕ

ಹುಬ್ಬಳ್ಳಿ: ಪ್ರಯಾಣಿಕರೊಬ್ಬರು ಬಸ್ಸಿನಲ್ಲಿ ಬಿಟ್ಟು ಹೋಗಿದ್ದ ಪ್ರಮುಖ ದಾಖಲೆಗಳಿದ್ದ ಬ್ಯಾಗನ್ನು, ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಕಂ ನಿರ್ವಾಹಕರೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ.

ಲ್ಯಾಪ್ ಟಾಪ್, ಪೆನ್ ಡ್ರೈವ್, ಹಣ ವನ್ನು ಮರಳಿ ಕೊಟ್ಟಿದ್ದಾರೆ. ತೆಲಂಗಾಣ ರಾಜ್ಯದ ಹೈದರಾಬಾದನಲ್ಲಿರುವ ಏರೊನಾಟಿಕಲ್ ಇಂಜಿನಿಯರಿಂಗ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ವೀರಂ ಮಹಿಧರ ರೆಡ್ಡಿ ಎಂಬುವರು, ಅಕ್ಟೋಬರ್ 2ರಂದು ಬುಧವಾರ ಮಧ್ಯಾಹ್ನ ಹುಬ್ಬಳ್ಳಿಯಿಂದ ಬೆಳಗಾವಿಗೆ ಪ್ರಯಾಣ ಮಾಡಿದ್ದಾರೆ. ಬೆಳಗಾವಿ ಬಸ್ ನಿಲ್ದಾಣದಲ್ಲಿ ತಮ್ಮ ಬ್ಯಾಗನ್ನು ಬಸ್ಸಿನಲ್ಲಿಯೇ ಮರೆತು ಹೋಗಿದ್ದರು.

ಪ್ರಯಾಣಿಕರೆಲ್ಲ ಇಳಿದ ನಂತರ ಸದರಿ ಬ್ಯಾಗನ್ನು ಗಮನಿಸಿದ ಚಾಲಕ ಎನ್.ಎಂ. ಬಿರಾದಾರ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಮೇಲಾಧಿಕಾರಿಗಳ ಸಮಕ್ಷಮದಲ್ಲಿ ಬ್ಯಾಗು ತೆಗೆದು ನೋಡಲಾಗಿ ಅದರಲ್ಲಿ ಲ್ಯಾಪ್ ಟಾಪ್, 19,500 ನಗದು ಹಣ, ಪೆನ್ ಡ್ರೈವ್, ಮತ್ತಿತರ ಪ್ರಮುಖ ದಾಖಲೆಗಳು ಇರುವುದು ಕಂಡುಬಂದಿದೆ.

ಗೋಕುಲ ರಸ್ತೆ ಬಸ್ ನಿಲ್ದಾಣದಲ್ಲಿ ವಿಭಾಗಿಯ ನಿಯಂತ್ರಣಾಧಿಕಾರಿ ಹಾಗೂ ನಿಲ್ದಾಣಾಧಿಕಾರಿಯವರ ಸಮಕ್ಷಮದಲ್ಲಿ ಚಾಲಕರ ಮೂಲಕ ಬ್ಯಾಗನ್ನು ವಾರಸುದಾರರಿಗೆ ಹಿಂದಿರುಗಿಸಿದ್ದಾರೆ. ಇನ್ನು ಪ್ರಾಮಾಣಿಕತೆ ಮೆರೆದ ಸಿಬ್ಬಂದಿಯನ್ನು ಅಭಿನಂದಿಸಿದ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್‌. ರಾಮನಗೌಡರ, ಬಸ್ ನಿಲ್ದಾಣಾಧಿಕಾರಿ ವಿ.ಎಸ್‌.ಹಂಚಾಟೆ, ಸಾರಿಗೆ ನಿಯಂತ್ರಕರಾದ ಎಸ್‌.ವಿ. ಸಾತಪುಟೆ ಹಾಗೂ ಆರ್.ಅರ್. ಚವ್ಹಾಣ ಮತ್ತಿತರರು ಶ್ಲಾಘಿಸಿದ್ದಾರೆ.

Share News

About Shaikh BigTv

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *