Breaking News

ಸಾಮಾಜಿಕ ಆರ್ಥಿಕ ಗಣತಿ ವರದಿ ಆದಷ್ಟು ಬೇಗ ಜಾರಿಯಾಗಲಿ: ಬಸವರಾಜ ರಾಯರಡ್ಡಿ

ಕೊಪ್ಪಳ: ಸಿಎಂ ಸಿದ್ದರಾಮಯ್ಯ ಅವರು ಹಿಂದೆ ನಮ್ಮದೆ ಸರ್ಕಾರದಲ್ಲಿ ಸಮೀಕ್ಷೆ ಮಾಡಿಸಿದ ಸಾಮಾಜಿಕ, ಆರ್ಥಿಕ ಗಣತಿ ವರದಿ ಜಾರಿ ಮಾಡಲಿ, ಇದೇ ವಾರದಲ್ಲಿ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದು ನವೆಂಬರ್ 01 ರಂದು ಅನುಷ್ಠಾನ ಮಾಡಲಿ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.
ಕೊಪ್ಪಳ ತಾಲೂಕಿನ ಗಿಣಗೇರಾ ವಿಮಾನ ನಿಲ್ದಾಣದ ಬಳಿ ಮಾತನಾಡಿದ ಅವರು, ರಾಜ್ಯದಲ್ಲಿ ಅನವಶ್ಯಕ ವಿಚಾರ ಚರ್ಚೆ ಆಗುತ್ತಿವೆ. ಅವೆಲ್ಲ ನಿಲ್ಲಬೇಕು. ಕರ್ನಾಟಕ ಸಂಸ್ಕಾರ ಸಾಮಾಜಿಕ ನ್ಯಾಯ ಇರುವಂತಹ ಪ್ರದೇಶ ಬಸವೇಶ್ವರ ನಡೆದಾಡುವ ನೆಲವಿದು ಎಂದರು.
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿವೃದ್ಧಿ ಚರ್ಚೆ ಮಾಡಿರುವೆ 2013-18 ರಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಎಲ್ಲ ಧರ್ಮ, ಜಾತಿಗಳು ಒಳಗೊಂಡ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಿಂದುಳಿದ ಸಮೀಕ್ಷೆ ಮಾಡಿಸಿದೆ. ಆ ಸಮೀಕ್ಷೆಗೆ 165 ಕೋಟಿ ಕೊಟ್ಟು ಸರ್ವೆ ಮಾಡಿಸಿದೆ ಕಾಂತರಾಜ ಅವರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡಿದ್ದಾರೆ. ಆಗ ಸಿಎಂಗೆ ಕೊನೆಯ ಅವಧಿಯಲ್ಲಿ ವರದಿ ತಲುಪಲಿಲ್ಲ ಕುಮಾರಸ್ವಾಮಿ ಸಿಎಂ ಆದಾಗಲೂ ಬಿಡುಗಡೆ ಮಾಡಲಿಲ್ಲ. ಬೊಮ್ಮಾಯಿ ಸರ್ಕಾರ ವರದಿ ಬಿಡುಗಡೆ ಮಾಡಲಿಲ್ಲ ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ನೇಮಕವಾಗಿದ್ದ ಜಯಪ್ರಕಾಶ್ ಹೆಗಡೆ ಅವಧಿ ಹೆಚ್ಚು ಮಾಡಿದೆವು ಅವರು ಸಾಮಾಜಿಕ ಗಣತಿ ವರದಿಯನ್ನು 2024ರ ಫೆ.29 ಕ್ಕೆ ಸರ್ಕಾರಕ್ಕೆ ತಲುಪಿದೆ. ವರದಿ ಕೊಟ್ಟು ಎಂಟು ತಿಂಗಳಾಗಿದೆ ಸಿಎಂ ಸಿದ್ದರಾಮಯ್ಯ ಅವರು ವರದಿ ಬಗ್ಗೆ ಯೋಚನೆ ಮಾಡುವೆ ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ ವರದಿ ಬಿಡುಗಡೆ ಮಾಡಲು ಒತ್ತಾಯ ಮಾಡುವೆ ಎಂದರು.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *