Breaking News

ಮಾನ್ವಿಯಲ್ಲಿ 36 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ನಾಳೆ ಸಿಎಂ ಸಿದ್ದರಾಮಯ್ಯರಿಂದ ಚಾಲನೆ

ಮಾನ್ವಿ: ಅ.5ರಂದು ಮಾನ್ವಿ ಪಟ್ಟಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಸದಸ್ಯರು, ಶಾಸಕರು ಆಗಮಿಸಲಿದ್ದಾರೆ.
ಪಟ್ಟಣದಲ್ಲಿ ₹9.5ಕೋಟಿ ವೆಚ್ಚದ ಎಕ್ಸ್‌ಪ್ರೆಸ್‌ ಬಸ್ ನಿಲ್ದಾಣ ನಿರ್ಮಾಣ ಹಾಗೂ ಸಣ್ಣ ನೀರಾವರಿ ಇಲಾಖೆಯ ₹36 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ನಂತರ ಕಾಂಗ್ರೆಸ್ ಪಕ್ಷದ ಸ್ವಾಭಿಮಾನಿ ಸಮಾವೇಶದಲ್ಲಿ ಭಾಗವಹಿಸುವರು. ಸಣ್ಣ ‌ನೀರಾವರಿ ಸಚಿವ ಎನ್.ಎಸ್.ಬೋಸರಾಜು ಹಾಗೂ ಶಾಸಕ ಜಿ.ಹಂಪಯ್ಯ ನಾಯಕ ನೇತೃತ್ವದಲ್ಲಿ ಈ ಸಮಾವೇಶದ ಸಿದ್ಧತೆ ಕೈಗೊಳ್ಳಲಾಗಿದೆ. ಈ ಸಮಾವೇಶಕ್ಕಾಗಿ ಮಾನ್ವಿ ಪಟ್ಟಣದ ಹೊರವಲಯದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದೆ 50ಸಾವಿರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆ ಇದೆ. ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ನಂತರ ಮಾನ್ವಿ ಪಟ್ಟಣಕ್ಕೆ ಇದೇ ಮೊದಲ ಬಾರಿಗೆ ಆಗಮಿಸುತ್ತಿರುವುದು ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿಸಿದೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಅಹಿಂದ ಸಮುದಾಯದ ಮುಖಂಡರು ಈ ಸಮಾವೇಶದಲ್ಲಿ ಹೆಚ್ಚಿನ ಜನಬೆಂಬಲ ವ್ಯಕ್ತಪಡಿಸುವ ಮೂಲಕ ಸಿದ್ದರಾಮಯ್ಯ ಅವರಿಗೆ ನೈತಿಕ ಸ್ಥೈರ್ಯ ತುಂಬಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *