Breaking News

ಪಿಡಿಒಗಳಿಂದ ಅನಿರ್ದಿಷ್ಟಾವಧಿ ಮುಷ್ಕರ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಅಧಿಕಾರಿಗಳ ಹಾಗೂ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ರಾಜ್ಯಾದ್ಯಂತ ಸೇವೆಯನ್ನು ಸ್ಥಗಿತಗೊಳಿಸಿ ಫ್ರೀಡಂ ಪಾರ್ಕ್‌ನಲ್ಲಿ ಕ‌ರ್ನಾಟಕ ರಾಜ್ಯ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಹಾಗೂ ಸಂಬಂಧಪಟ್ಟ ಸಂಘಟನೆಗಳು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿವೆ.
ಪಂಚಾಯತ್‌ಗಳ ಜನಸಂಖ್ಯೆ ಎರಡರಿಂದ ಮೂರು ಪಟ್ಟು ಹೆಚ್ಚಾಗಿದೆ ಆದರೆ ಸಿಬಂದಿ ಸಂಖ್ಯೆ ಮಾತ್ರ 30 ವರ್ಷಗಳ ಹಿಂದಿನ ಜನಸಂಖ್ಯೆಯ ಅನುಪಾತದಲ್ಲಿದೆ. ಸಿಬ್ಬಂದಿ ಕೊರತೆಯಿಂದ ಹೆಚ್ಚುವರಿ ಹೊರೆ ಬೀಳುತ್ತಿದೆ ದಿನದಿಂದ ದಿನಕ್ಕೆ ಕೆಲಸದ ಒತ್ತಡ ತೀವ್ರಗೊಳ್ಳುತ್ತಿದೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಲ್ಲ ಕಾರ್ಯದರ್ಶಿ ಮತ್ತು ಲೆಕ್ಕ ಪರಿಶೋಧಕರ ಹುದ್ದೆಗಳನ್ನು ಭರ್ತಿ ಮಾಡಬೇಕು. ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ವೃಂದ ಮತ್ತು ನೇಮಕಾತಿ ನಿಯಮಗಳನ್ನು ರಚಿಸುವಾಗ ಪಿಡಿಒಗಳ ಸಲಹೆ ಗಳನ್ನು ಪರಿಗಣಿಸದೆ ಅಳವಡಿಸಲಾದ ಅವೈಜ್ಞಾನಿಕ ನಿಯಮ ಕೈಬಿಡಬೇಕು ಕುಂದುಕೊರತೆ ಪ್ರಾಧಿಕಾರವನ್ನು ಚುರುಕುಗೊಳಿಸಬೇಕು. ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಹಾಗೂ ನೌಕರರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರಕಾರ ವಿಫ‌ಲವಾದರೆ ಹೋರಾಟ ತೀವ್ರ ಗೊಳಿಸುವುದಾಗಿ ಸಂಘಟನೆಗಳು ಸರಕಾರಕ್ಕೆ ಎಚ್ಚರಿಕೆ ನೀಡಿವೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *