ಮಸ್ಕಿ: ತಾಲ್ಲೂಕಿನ ಬಳಗಾನೂರು ಗ್ರಾಮದಲ್ಲಿ ಶುಕ್ರವಾರ ಸಂಜೆ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಮಲ್ಲಪ್ಪ (54) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಬಳಗಾನೂರು ಸುತ್ತಮುತ್ತ ಗುಡುಗು ಸಹಿತ ಮಳೆಯಾಗಿದೆ.
ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ಮಲ್ಲಪ್ಪ ಮಳೆ ಬಂದಿದ್ದರಿಂದ ಮರದ ಕೆಳಗೆ ನಿಂತಿದ್ದರು. ಇದೇ ಸಂದರ್ಭದಲ್ಲಿ ಮರಕ್ಕೆ ಸಿಡಿಲು ಅಪ್ಪಳಿಸಿದ್ದು, ಮಲ್ಲಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಬಳಗಾನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

