Breaking News

ಬಿಜೆಪಿಯವರೇ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ : ಜಿ.ಪರಮೇಶ್ವರ್

ಹುಬ್ಬಳ್ಳಿ: ಜಾತಿ ಗಣತಿ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡುತ್ತೇವೆ. ಯಾರ ಮೇಲೂ ನಾವು ಸೇಡಿನ ರಾಜಕಾರಣ ಮಾಡುತ್ತಿಲ್ಲ. ಬಿಜೆಪಿಯವರೇ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹುಬ್ಬಳ್ಳಿ ಪ್ರೈ ಓವರ್ ಅವಘಡದಲ್ಲಿ ಪೊಲೀಸ್‌ ಅಧಿಕಾರಿ ಸಾವಿನ ಬಗ್ಗೆ ಮಾಹಿತಿ ಇಲ್ಲ. ಅಧಿಕಾರಿಗಳಿಂದ ಇಂದು ಮಾಹಿತಿ ಪಡೆಯುತ್ತೇನೆ. ಪ್ರತಿ ಪಕ್ಷದವರು ಸರ್ಕಾರಕ್ಕೆ ಸಲಹೆ, ಸೂಚನೆ ಕೊಡಬೇಕು. ಅದನ್ನು ಮೀರಿ ಅವರು ರಾಜಕಾರಣ ಮಾಡುತ್ತಿದ್ದಾರೆ ಎಂದರು.

545 ಪಿಎಸ್‌ಐ ಅಭ್ಯರ್ಥಿಗಳ ವಿವಾದ ನ್ಯಾಯಾಲಯದಲ್ಲಿದೆ, ಕಗ್ಗಂಟಾಗಿದೆ, ಶೀಘ್ರವಾಗಿ ಬಿಡಿಸುತ್ತೇವೆ. ಬೆಂಗಳೂರಿನಲ್ಲಿ ಪಾಕಿಸ್ತಾನದವರು ಅಕ್ರಮವಾಗಿ ನೆಲೆಸಿದ್ದನ್ನು ಪತ್ತೆ ಹಚ್ಚಿ, ಬಂಧಿಸಿರುವುದು ಕರ್ನಾಟಕ ಪೋಲಿಸರು. ಕೇಂದ್ರ ಎಜೆನ್ಸಿಗಳು ಪಾಕಿಸ್ತಾನದವರ ಇರುವಿಕೆ ಪತ್ತೆ ಹಚ್ಚುವಲ್ಲಿ ವಿಫಲವಾಗಿವೆ ಎಂದು ಅವರು ಹೇಳಿದರು.

Share News

About Shaikh BigTv

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *