ಹುಬ್ಬಳ್ಳಿ: ನಮಗೂ ರಾಜಕಾರಣ ಮಾಡೋಕೆ ಬರುತ್ತೆ. ಇನ್ನು ಮುಂದೆ ನಾವೂ ರಾಜಕಾರಣ ಮಾಡುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಟಾಂಗ್ ಕೊಟ್ಟಿದ್ದಾರೆ.
ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಪರಮೇಶ್ವರ್ ವಾಗ್ದಾಳಿ ನಡೆಸಿದರು. ಮುಡಾ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪದೇ ಪದೇ ರಾಜಕಾರಣ ಮಾಡುತ್ತಿವೆ. ಪ್ರಕರಣ ದಾಖಲಾಗಿದೆ, ತನಿಖೆ ಮಾಡಲು ಅವಕಾಶ ಮಾಡಿಕೊಡಬೇಕು. ಅದನ್ನು ಬಿಟ್ಟು ನಿತ್ಯ ರಾಜಕಾರಣ ಮಾಡೋದು ಸರಿಯಲ್ಲ ಎಂದರು.
ಪ್ರಧಾನಿ ಮೋದಿ ಅಂಥವರು ರಾಜಕಾರಣ ಮಾಡ್ತಿದ್ದಾರೆ.ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರೋ ಚುನಾವಣೆಯಲ್ಲಿ ಮುಡಾ ವಿಚಾರ ಪ್ರಸ್ತಾಪಿಸೋ ಅವಶ್ಯಕತೆ ಏನು..? ನಾನು ರಾಜೀನಾಮೆ ಕೊಡಲು ಸಿದ್ಧ, ಸಿಎಂ ರಾಜೀನಾಮೆ ಕೊಡ್ತಾರಾ ಅನ್ನೋ ಅಶೋಕ್ ಹೇಳಿಕೆಗೆ ಕಿಡಿ ಕಾರಿದ್ದು, ಆರ್. ಅಶೋಕ್
ಮೊದಲು ರಾಜೀನಾಮೆ ಕೊಡಲಿ. ನಂತರ ಬೇಕಿದ್ದರೆ ಅದರ ಬಗ್ಗೆ ವಿಚಾರ ಮಾಡೋಣ ಎಂದು ಲೇವಡಿ ಮಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

