ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಗೃಹ ಸಚಿವ ಜಿ.ಪರಮೇಶ್ವರ ಅವರು, ವಾಣಿಜ್ಯನಗರಿ ಹುಬ್ಬಳ್ಳಿಯ ವಿಮಾನಕ್ಕೆ ಆಗಮಿಸುತ್ತಿದ್ದಂತೆಯೇ ಪೊಲೀಸ್ ಇಲಾಖೆಯಿಂದ ಹಾಗೂ ಕಾಂಗ್ರೆಸ್ ಮುಖಂಡರು ಅದ್ಧೂರಿಯಾಗಿ ಸ್ವಾಗತಿಸಿದರು.
ಇನ್ನೂ ಹುಬ್ಬಳ್ಳಿಗೆ ಆಗಮಿಸಿದ ಗೃಹ ಸಚಿವರು, ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿದ್ದು, ಇದೇ ವೇಳೆ ಹುಬ್ಬಳ್ಳಿ – ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಗಾಡ್ ಆಫ್ ಹಾನರ್ ಮೂಲಕ ಗೃಹ ಸಚಿವರಿಗೆ ವಿಶೇಷ ಗೌರವ ನೀಡಲಾಯಿತು.
ಬೆಳಿಗ್ಗೆ 10 ಗಂಟೆಗೆ ಧಾರವಾಡದ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

