Breaking News

ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ

ಚಂಡೀಗಢ: ಭಾರೀ ಕುತೂಹಲ ಮೂಡಿಸಿದ್ದ ಹರಿಯಾಣದ ವಿಧಾನಸಭಾ ಚುನಾವಣಾ ಕದನ ಮಹತ್ವದ ಘಟ್ಟ ತಲುಪಿದ್ದು ಇಂದು ಹರಿಯಾಣದ ಎಲ್ಲಾ 90 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ.
ಇಂದು ಒಂದೇ ಹಂತದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ 90 ಶಾಸಕರನ್ನು ಆಯ್ಕೆ ಮಾಡಲು 2 ಕೋಟಿಗೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಲು ಮುಂದಾಗಿದ್ದು, ಬೆಳಗ್ಗೆ 7 ಗಂಟೆಗೆ ಆರಂಭಗೊಂಡಿರುವ ಮತದಾನ ಪ್ರಕ್ರಿಯೆ ಸಂಜೆ 6 ಗಂಟೆಯವರೆಗೆ ನಡೆಯಲಿದೆ.
ಆಡಳಿತಾರೂಢ ಬಿಜೆಪಿ ಈ ವಿಧಾನಸಭೆ ಚುನಾವಣೆಯ ಹ್ಯಾಟ್ರಿಕ್ ಗೆಲುವಿನ ಮೇಲೆ ಕಣ್ಣಿಟ್ಟಿದ್ದು, ಕಾಂಗ್ರೆಸ್ 10 ವರ್ಷಗಳ ನಂತರ ಮತ್ತೆ ಅಧಿಕಾರಕ್ಕೆ ಬರುವ ಕನಸು ಇಟ್ಟುಕೊಂಡಿದೆ.
ಹಾಲಿ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಭೂಪಿಂದರ್ ಸಿಂಗ್ ಹೂಡಾ, ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್, ಜೆಜೆಪಿ ನಾಯಕ ದುಷ್ಯಂತ್ ಚೌತಾಲಾ ಸೇರಿದಂತೆ ಒಟ್ಟು 1,027 ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ಇಂದಿನ ಚುನಾವಣೆ ನಿರ್ಧರಿಸಲಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *