Breaking News

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 18ನೇ ಕಂತಿನ ಹಣ ಇಂದು ಬಿಡುಗಡೆ

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿಯಡಿ 18ನೇ ಕಂತಿನ ₹20 ಸಾವಿರ ಕೋಟಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬಿಡುಗಡೆ ಮಾಡಲಿದ್ದಾರೆ. ದೇಶದ 9.4 ಕೋಟಿಗೂ ಹೆಚ್ಚು ರೈತರಿಗೆ ಈ ಯೋಜನೆಯಡಿ ಸೌಲಭ್ಯ ಸಿಗಲಿದೆ.
ಮಹಾರಾಷ್ಟ್ರದ ವಾಶಿಮ್‌ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ನೇರ ನಗದು ವರ್ಗಾವಣೆಗೆ (ಡಿಬಿಟಿ) ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ. ಕಿಸಾನ್ ಸಮ್ಮಾನ್ ಯೋಜನೆಯ 18ನೇ ಕಂತಿನ ಬಿಡುಗಡೆಗೆ 9 ಕೋಟಿಗೂ ಅಧಿಕ ರೈತರು ಕಾಯುತ್ತಿದ್ದಾರೆ.
9.4 ಕೋಟಿ ಫಲಾನುಭವಿ ರೈತರ ಖಾತೆಗಳಿಗೆ ತಲಾ 2,000 ರೂ ಸಿಗಲಿದೆ. ಕೇಂದ್ರದಿಂದ ನಾಳೆ ಪಿಎಂ ಕಿಸಾನ್ ಫಲಾನುಭವಿಗಳಿಗೆ ಒಟ್ಟು 20,000 ಕೋಟಿ ರೂ ಹಣ ಬಿಡುಗಡೆ ಆಗಲಿದೆ. 2019ರಲ್ಲಿ ಆರಂಭವಾದ ಈ ಸ್ಕೀಮ್​ನಲ್ಲಿ ಐದು ವರ್ಷದಲ್ಲಿ 3 ಲಕ್ಷ ಕೋಟಿಗೂ ಅಧಿಕ ಹಣವನ್ನು ಸರ್ಕಾರ ವ್ಯಯಿಸಿದೆ. ಇಂದಿನ ಬಿಡುಗಡೆ ಸೇರಿಸಿದರೆ ಸರ್ಕಾರದ ವೆಚ್ಚ ಸುಮಾರು 3.45 ಲಕ್ಷ ಕೋಟಿ ರೂ ಆಗಬಹುದು.
2024ರ ಜೂನ್ 18ರಂದು ಪ್ರಧಾನಿಗಳು ವಾರಾಣಸಿಯಲ್ಲಿ ಪಿಎಂ ಕಿಸಾನ್ 17ನೇ ಕಂತಿನ ಹಣ ಬಿಡುಗಡೆ ಮಾಡಿದ್ದರು. 9.26 ಕೋಟಿ ರೈತರ ಖಾತೆಗಳಿಗೆ 21,000 ಕೋಟಿ ರೂ ಹಣ ಸಂದಾಯವಾಗಿತ್ತು. ಪಿಎಂ ಕಿಸಾನ್ ಸ್ಕೀಮ್​ನಲ್ಲಿ ರೈತರಿಗೆ ಸರ್ಕಾರ ವರ್ಷಕ್ಕೆ 6,000 ರೂ ಹಣವನ್ನು ಸಹಾಯಧನವಾಗಿ ನೀಡುತ್ತದೆ. 2,000 ರೂಗಳಂತೆ ವರ್ಷಕ್ಕೆ ಮೂರು ಕಂತುಗಳಲ್ಲಿ ಈ ಹಣವನ್ನು ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗುತ್ತದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *