Breaking News

ಅವ್ಯವಸ್ಥೆಯ ಆಗರವಾದ ಜಂಬಗಿ ಗ್ರಾ.ಪಂ ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ

ಬೀದರ್​: ತಮ್ಮ ಸತ್ಯಮಾರ್ಗದಿಂದ ಇಡೀ ವಿಶ್ವಕ್ಕೆ ಚಿರಪರಿಚಿತರಾದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಹೆಸರಿನಲ್ಲಿ ನಮ್ಮ ರಾಜ್ಯ ಸರ್ಕಾರ ವಿಶೇಷ ಸಾಧನೆ ಮಾಡಿದ ಗ್ರಾಮ ಪಂಚಾಯಿತಿಗಳಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಆದ್ರೆ, ಬೀದರ್​ನಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಪಡೆದ ಔರಾದ್ ತಾಲೂಕಿನ ಜಂಬಗಿ ಗ್ರಾಮ ಪಂಚಾಯತ್ ಸರ್ಕಾರಕ್ಕೆ ‌ಚಳ್ಳೆ ಹಣ್ಣು ತಿನ್ನಿಸಿ, ಗಾಂಧೀಜಿ ಅವರ ಹೆಸರಿಗೆ ಕಳಂಕ ತರುವ ಕೆಲಸಕ್ಕೆ ಮುಂದಾಗಿದೆ.
ಹೌದು, ಸ್ವಚ್ಛ ಭಾರತ ಅಭಿಯಾನದ ಹೆಸರಿನಲ್ಲಿ ಬೀದರ್ ಜಿಲ್ಲೆಗೆ ಕೊಟ್ಯಾಂತರ ರೂಪಾಯಿ ಹಣ ಹರಿದು ಬಂದಿದ್ದು, ದೇಶವನ್ನು ಬಯಲು ಶೌಚ ಮುಕ್ತ ಮಾಡಲು ಪ್ರಧಾನಿ ಮೋದಿ ಅವರು ನೂರಾರು ಕೋಟಿ ಅನುದಾನವನ್ನು ಗ್ರಾಮ ಪಂಚಾಯಿತಿಗಳಿಗೆ ನೀಡುತ್ತಿದ್ದಾರೆ. ಆದರೆ, ಈ ಹಣ ಸರಿಯಾಗಿ ಬಳಕೆಯಾಗುತ್ತಿಲ್ಲ ಇಲ್ಲಿ ಶೌಚಾಲಯಗಳು ಇದ್ದರೂ ಕೂಡ ಬಳಕೆಯಾಗದೆ, ಜನರು ಇಂದಿಗೂ ಕೂಡ ಬಯಲು ಬರ್ಹಿದೆಸೆಗೆ ಹೋಗುವಂತಾ ಸ್ಥಿತಿಯಿಲ್ಲಿದೆ.
ಇಡೀ ಗ್ರಾಮವನ್ನ ಒಂದು ಸುತ್ತು ಹಾಕಿದರೆ, ಎಲ್ಲಿ ನೋಡಿದರಲ್ಲಿ ಕಸದ ರಾಶಿಯೇ ಇದೆ. ರಸ್ತೆಯ ಮೇಲೆ ಕೊಳಚೆ ನೀರು ಹರಿಯುತ್ತಿದೆ. ಕುಡಿಯುವ ನೀರಿನ ಸಮಸ್ಯೆಯಿಂದ ಗ್ರಾಮಸ್ಥರು ಬಳಲುತ್ತಿದ್ದಾರೆ. ಈ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವಿದ್ದರೂ ಅದು ಕೂಡ ಬಳಕೆಯಾಗದೆ ತುಕ್ಕು ಹಿಡಿಯುತ್ತಿದೆ. ಸುಚಿತ್ವ ಇಲ್ಲದ ಗ್ರಾಮ ಪಂಚಾಯತಿಗೆ ಗಾಂಧಿ ಗ್ರಾಮ ಪುರಸ್ಕಾರ್ ಸಿಕ್ಕಿದ್ದು ಹೇಗೆ ಎಂದು ಇಲ್ಲಿನ ಗ್ರಾಮಸ್ಥರು ಪ್ರಶ್ನೀಸುತ್ತಿದ್ದು, ನಮಗೆ ಕುಡಿಯುವ ನೀರಿಲ್ಲ, ಸ್ವಚ್ಚತೆಯಿಲ್ಲ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *