Breaking News

ಪರಮೇಶ್ವ‌ರ್ ಹೇಳಿಕೆಗೆ ಪ್ರಹ್ಲಾದ ಜೋಶಿ ಕಿಡಿ

ಹುಬ್ಬಳ್ಳಿ: ಗೃಹ ಮಂತ್ರಿ ಜಿ.ಪರಮೇಶ್ವರ್ ಬೇಜವಬ್ದಾರಿಯಿಂದ ಹೇಳಿಕೆ ಕೊಡುವುದು ಸರಿಯಲ್ಲ. ಕಾಂಗ್ರೆಸ್‌ನವರು ಅಧಿಕಾರದಲ್ಲಿದ್ದಾಗ ಎಷ್ಟು ಜನ ನುಸುಳುಕೋರರು ಭಾರತಕ್ಕೆ ಬಂದಿದ್ದರು. ಎಷ್ಟು ಭಯೋತ್ಪಾದನಾ ಚಟುವಟಿಕೆಗಳಾಗಿವೆ? ಎಲ್ಲಲ್ಲಿ ಬಾಂಬ್‌ ಬ್ಲಾಸ್ಟ್‌ಗಳಾಗಿವೆ ಎಂಬುದನ್ನು ತಿಳಿದು ಮಾತನಾಡಲಿ. ಪಾಕಿಸ್ತಾನಿ ಪ್ರಜೆಗಳು ಭಾರತದಲ್ಲಿ ಅಕ್ರಮವಾಗಿ ನೆಲೆಸಲು ಕೇಂದ್ರ ಎಜೆನ್ಸಿಗಳು ಕಾರಣ ಎಂಬ ಪರಮೇಶ್ವ‌ರ್ ಹೇಳಿಕೆಗೆ ಪ್ರಹ್ಲಾದ ಜೋಶಿ ಕಿಡಿ ಕಾರಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ
ಅವರು, ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಗೃಹ
ಮಂತ್ರಿಯಾಗಿ ಜೆ.ಪರಮೇಶ್ವರ ಕೆಲಸ ಮಾಡಿದ್ದಾರೆ.
ನುಸುಳುಕೊರರು ಭಾರತಕ್ಕೆ ನುಗ್ಗುವದನ್ನ ಕಡಿವಾಣ ಹಾಕಿದ್ದೆ ಬಿಜೆಪಿ ಸರ್ಕಾರ. ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಇದ್ದಾಗ ಬೆಂಗಳೂರು, ಹೈದ್ರಾಬಾದ್, ಮುಂಬೈ, ಹುಬ್ಬಳ್ಳಿ ಸೇರಿದಂತೆ ಅನೇಕ ಕಡೆ ಬಾಂಬ್ ಬ್ಲಾಸ್ಟ್‌ಗಳಾಗಿವೆ. ಅದನ್ನೇಲ್ಲವನ್ನೂ ನೆನಪು ಮಾಡಿಕೊಳ್ಳಿ, ಬಾಂಬ್ ಬ್ಲಾಸ್ಟ್ ಆಗಲಿಕ್ಕೆ ಕಾರಣ
ನುಸುಳುಕೋರರು. ಬಿಜೆಪಿ ಸರ್ಕಾರ ಬಂದ ಮೇಲೆ ಇವಕ್ಕೆಲ್ಲ ಕಡಿವಾಣ ಬಿದ್ದಿದೆ ಎಂದರು.

Share News

About Shaikh BigTv

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *