Breaking News

ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅತಿಥಿ ಶಿಕ್ಷಕರ ಹಂಚಿಕೆ ಮಾಡಿ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಕರ್ನಾಟಕದ ಶಾಲಾ ಶಿಕ್ಷಣ ಇಲಾಖೆ ಆಯುಕ್ತ ಕಛೇರಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅತಿಥಿ ಶಿಕ್ಷಕರ ಹಂಚಿಕೆ ಮಾಡಿ ಆದೇಶಿಸಿದೆ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರುಗಳನ್ನು ನೇಮಕ ಮಾಡಿಕೊಳ್ಳುವ ಕುರಿತು 2ನೇ ಹಂತದ ಹೆಚ್ಚುವರಿ ಅತಿಥಿ ಶಿಕ್ಷಕರ ಹಂಚಿಕೆ ಬಗ್ಗೆ ಆದೇಶಿಸಲಾಗಿದೆ.
ಈ ಕುರಿತು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಜ್ಞಾಪನಾ ಪತ್ರವನ್ನು ಹೊರಡಿಸಿದ್ದಾರೆ. ಈ ಪತ್ರ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರುಗಳನ್ನು ನೇಮಕ ಮಾಡಿಕೊಳ್ಳುವ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ.
ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಒಟ್ಟು ಒಟ್ಟು ಹಂಚಿಕೆಯಾದ ಅತಿಥಿ ಶಿಕ್ಷಕರ ಸಂಖ್ಯೆ 34,192. ಸದ್ಯ 1,766 ಅತಿಥಿ ಶಿಕ್ಷಕರ ನೇಮಕಕ್ಕೆ ತಾಲೂಕುವಾರು ಹಂಚಿಕೆಯನ್ನು ಮಾಡಲಾಗಿದೆ. ಜಿಲ್ಲಾ ಉಪನಿರ್ದೇಶಕರುಗಳಿಂದ ಸ್ವೀಕೃತವಾದ ಪ್ರಸ್ತಾವನೆಗಳಂತೆ ಈ ಹಂಚಿಕೆಯನ್ನು ಮಾಡಲಾಗಿದೆ ಎಂದು ಹೇಳಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *