Breaking News

ಗಂಗೂಬಾಯಿ ಹಾನಗಲ್ ಸಂಗೀತ ಗುರುಕುಲ ವಿದ್ಯಾರ್ಥಿಗಳ ಸ್ಥಿತಿ ಅತಂತ್ರ

ಹುಬ್ಬಳ್ಳಿ: ಗಂಗೂಬಾಯಿ ಹಾನಗಲ್ ಸಂಗೀತ ಗುರುಕುಲ ವಿದ್ಯಾರ್ಥಿಗಳ ಸ್ಥಿತಿ ಅತಂತ್ರವಾಗಿದೆ. ವಸತಿ ನಿಲಯ ಕೂಡಲೇ ತೆರವು ಮಾಡುವಂತೆ ಸೂಚನೆ ನೀಡಿದ್ದು, ಕುಲಸಚಿವರು ಇಷ್ಟು ದಿನ ಮೌಖಿಕ ಆದೇಶ ಮಾಡಿದ್ದರು. ಆದರೆ ಈಗ ಲಿಖಿತವಾಗಿ ಸುತ್ತೋಲೆ ಹೊರಡಿಸಿರುವುದು ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿದೆ.

ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ಹುಬ್ಬಳ್ಳಿಯ ನಿಲಯದಲ್ಲಿ ಅನಧಿಕೃತವಾಗಿ ವಿದ್ಯಾರ್ಥಿಗಳ ವಾಸ ಮಾಡುತ್ತಿದ್ದಾರೆ ಎಂಬ ಆರೋಪದ ಬೆನ್ನಲ್ಲೇ ಕೂಡಲೇ ಹಾಸ್ಟೇಲ್‌ ತೆರವುಗೊಳೆಸಬೇಕೆಂದು ವಿದ್ಯಾರ್ಥಿಗಳಿಗೆ ಸೂಚನೆ ನೀಡಿದ್ದು, ಸಂಗೀತ ವಿ.ವಿ. ಕುಲಸಚಿವರಿಂದ ಸುತ್ತೋಲೆ ಹೊರಡಿಸಲಾಗಿದ್ದು, ಸುತ್ತೋಲೆ ಕಂಡು ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದಾರೆ.

ಇನ್ನೂ ಹುಬ್ಬಳ್ಳಿಯ ಗುರುಕುಲವನ್ನು ಮೈಸೂರು ಸಂಗೀತ ವಿವಿಗೆ ಸರ್ಕಾರ ಹಸ್ತಾಂತರಿಸಿದೆ. ಆದರೇ ಗುರುಕುಲದಲ್ಲಿದ್ದ ಕೊನೆಯ ಬ್ಯಾಚ್ ನಲ್ಲಿರುವ ಹತ್ತೊಂಬತ್ತು ವಿದ್ಯಾರ್ಥಿಗಳು ಅತಂತ್ರವಾಗಿದ್ದು, ಸದ್ಯ ವಸತಿ ನಿಲಯದಲ್ಲಿಯೇ ಉಳಿದುಕೊಂಡಿರುವ ವಿದ್ಯಾರ್ಥಿಗಳನ್ನು ಹೊರ ಹಾಕಲು ವಿ.ವಿ. ನಾನಾ ಕಸರತ್ತು ನಡೆಸಿದ್ದು, ಡೋಲಾಯಮಾನ ಸ್ಥಿತಿಯಲ್ಲಿ ಸಂಗೀತ ಗುರುಕುಲ ವಿದ್ಯಾರ್ಥಿಗಳಿದ್ದಾರೆ. ತಮ್ಮ ಭವಿಷ್ಯದ ದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ವಿದ್ಯಾರ್ಥಿಗಳ ಆಗ್ರಹಿಸಿದ್ದಾರೆ.

Share News

About Shaikh BigTv

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *