Breaking News

ಗ್ರಾ.ಪಂ ನೌಕರರ ಮುಷ್ಕರ: ವಿಜಯನಗರ ಜಿಲ್ಲೆಯಾದ್ಯಂತ ಗ್ರಾಮೀಣ ಆಡಳಿತ ಸೇವೆಗಳು ಸಂಪೂರ್ಣ ಸ್ಥಗಿತ

ಹೊಸಪೇಟೆ: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಶುಕ್ರವಾರದಿಂದ ಅನಿರ್ದಿಷ್ಟಾವಧಿಗೆ ಮುಷ್ಕರ ಆರಂಭವಾಗಿರುವದರಿಂದ ಜಿಲ್ಲೆಯಲ್ಲಿ ಗ್ರಾಮೀಣ ಸೇವೆಗಳು ಸಂಪೂರ್ಣ ಸ್ಥಗಿತಗೊಂಡಿವೆ.
ಶುಕ್ರವಾರ ಆನ್‌ಲೈನ್ ಸೇವೆಗಳು ಸಂಪೂರ್ಣ ಸ್ಥಗಿತಗೊಂಡಿದ್ದವು ಹೆಚ್ಚಿನ ಪಿಡಿಒಗಳು ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿಗೆ ಹೋಗದವರು ಕಚೇರಿಗೆ ಬಂದಿಲ್ಲ ಇಂದಿನ ಮಟ್ಟಿಗೆ ಸಾರ್ವಜನಿಕರಿಗೆ ಅಂತಹ ತೊಂದರೆ ಉಂಟಾದ ಮಾಹಿತಿ ಇಲ್ಲ. ಶನಿವಾರದಿಂದ ಮುಷ್ಕರದ ಬಿಸಿ ಮುಟ್ಟುವುದು ನಿಶ್ಚಿತ ಎಂದು ತಾಲ್ಲೂಕಿನ ಪಿಡಿಒ ಒಬ್ಬರು ತಿಳಿಸಿದರು.
ಜಿಲ್ಲೆಯಲ್ಲಿ 137 ಗ್ರಾಮ ಪಂಚಾಯಿತಿಗಳಿದ್ದು, ಎಲ್ಲಾ ಪಂಚಾಯಿತಿಗಳಲ್ಲೂ ಕೆಲಸ ಸ್ಥಗಿತಗೊಳಿಸಿ ಮುಷ್ಕರ ನಡೆಸಿದ ಬಗ್ಗೆ ಮಾಹಿತಿ ಇದೆ. ಸ್ಥಳೀಯವಾಗಿ ಸಮಸ್ಯೆ ಆಗಿರುವ ಕುರಿತು ಮಾಹಿತಿ ಬಂದಿಲ್ಲ ಎಂದು ಜಿಲ್ಲಾ ಪಂಚಾಯಿತಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

Share News

About BigTv News

Check Also

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ RFO ಲೋಕಾಯುಕ್ತ ಬಲೆಗೆ

ತುಮಕೂರು: ಗುಬ್ಬಿ ವಲಯ ಅರಣ್ಯಾಧಿಕಾರಿ (RFO) ಕೆ.ಎಸ್. ಸತೀಶ್ ಚಂದ್ರ ಅವರು ₹2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ …

Leave a Reply

Your email address will not be published. Required fields are marked *