ರಾಯಚೂರು: ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಗಣತಿ ವರದಿಯನ್ನು ಸಂಪುಟದಲ್ಲಿ ಚರ್ಚಿಸಿ, ಸದನದಲ್ಲೂ ಮಂಡಿಸಲಾಗುವುದು ಎಂದಿದ್ದ ಸಿಎಂ ಸಿದ್ದರಾಮಯ್ಯ ಅವರು ಇದೀಗ, ಜಾತಿ ಗಣತಿಯನ್ನು ನಾವು ತಕ್ಷಣಕ್ಕೆ ಜಾರಿ ಮಾಡುವುದಾಗಿ ಹೇಳಿಲ್ಲ ಈಗ ಚರ್ಚೆ ಮಾಡುತ್ತಿದ್ದೇವಷ್ಟೇ ಎಂದು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಜಾತಿ ಗಣತಿಗೆ ಆಕ್ಷೇಪ ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜಾತಿ ಗಣತಿಯ ಬಗ್ಗೆ ಮತ್ತೊಮ್ಮೆ ಚರ್ಚೆ ನಡೆಸಿ ಏನಾದರೂ ಲೋಪಗಳಿದ್ದರೆ ಸರಿಪಡಿಸಲಾಗುವುದು ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

