Breaking News

ವಿದ್ಯುತ್‍ ಉಪಕೇಂದ್ರದ ಕಾಮಗಾರಿ ಕಳಪೆ: ತನಿಖೆ ನಡೆಸಲು ಶಾಸಕ ಪ್ರಭು ಚವ್ಹಾಣ್ ಆಗ್ರಹ

ಔರಾದ್: ತಾಲ್ಲೂಕಿನ ನಾಗೂರ(ಬಿ) ಗ್ರಾಮದ ಬಳಿ ₹118 ಕೋಟಿ ಮೊತ್ತದಲ್ಲಿ ನಿರ್ಮಾಣವಾಗುತ್ತಿರುವ 220 ಕೆ.ವಿ. ವಿದ್ಯುತ್ ಉಪ ಕೇಂದ್ರದ ಕಾಮಗಾರಿ ಕಳಪೆಯಾಗಿದ್ದು, ಈ ಸಂಬಂಧ ತನಿಖೆ ನಡೆಸಬೇಕು ಎಂದು ಶಾಸಕ ಪ್ರಭು ಚವಾಣ್ ಆಗ್ರಹಿಸಿದ್ದಾರೆ.
ನಂಜುಂಡಪ್ಪ ವರದಿಯಂತೆ ಹಿಂದುಳಿದ ಪ್ರದೇಶವಾದ ಇಲ್ಲಿ ರೈತರಿಗೆ ನಿಯಮಿತ ವಿದ್ಯುತ್ ಪೂರೈಕೆ ಹಾಗೂ ಸಣ್ಣಪುಟ್ಟ ಕಾರ್ಖಾನೆ ಸ್ಥಾಪಿಸಿ ಜನರಿಗೆ ಉದ್ಯೋಗ ಕೊಡುವ ನಿಟ್ಟಿನಲ್ಲಿ ಬಹಳ ಪ್ರಯತ್ನಗಳ ನಂತರ ವಿದ್ಯುತ್ ಉಪಕೇಂದ್ರಕ್ಕೆ ಮಂಜೂರಾತಿ ಸಿಕ್ಕಿದೆ. ಆದರೆ, ಈ ಉಪ ಕೇಂದ್ರದ ಕಾಮಗಾರಿ ಅಂದಾಜುಪಟ್ಟಿಯಂತೆ ಆಗುತ್ತಿಲ್ಲ ಕಾಮಗಾರಿಗೆ ಅತ್ಯಾಧುನಿಕ ಉಪಕರಣ ಬಳಸುವ ಬದಲು ಎಲ್ಲಿಂದಲೂ ತಂದ ಹಳೆಯ ಉಪಕರಣಗಳು ಬಳಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಈ ರೀತಿಯ ಕಳಪೆ ಕಾಮಗಾರಿ ಆಗಲು ಅಧಿಕಾರಿಗಳು ಗುತ್ತಿಗೆದಾರರ ಜೊತೆಗೆ ಶಾಮೀಲಾಗಿರುವ ಸಾಧ್ಯತೆ ಇದೆ ತಕ್ಷಣ ಕಾಮಗಾರಿ ತಡೆಹಿಡಿದು ಸ್ವತಂತ್ರ ತನಿಖೆ ನಡೆಸಬೇಕು. ಈ ಬಗ್ಗೆ ಇಂಧನ ಸಚಿವರು ಹಾಗೂ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೂ ಪತ್ರ ಬರೆದಿರುವೆ ಎಂದು ಹೇಳಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *