Breaking News

ವಲಸೆ ಕುರಿಗಾಹಿಗಳಿಂದ ಅರ್ಜಿ ಆಹ್ವಾನ

ಧಾರವಾಡ ; ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಸಹಯೋಗದಲ್ಲಿ ಸಂಚಾರಿ ಅಥವಾ ವಲಸೆ ಕುರಿಗಾಹಿಗಳಿಗಾಗಿ ಗುರುತಿನ ಚೀಟಿ ನೀಡುವ ಯೋಜನೆಗಾಗಿ ವಲಸೆ ಕುರಿಗಾಹಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿಯನ್ನು ಭರ್ತಿ ಮಾಡಿ ಸೂಕ್ತ ದಾಖಲಾತಿಗಳೊಂದಿಗೆ ಸ್ಥಳೀಯ ಗ್ರಾಮ ಆಡಳಿತಾಧಿಕಾರಿ ಮತ್ತು ಪಶುವೈದ್ಯಾಧಿಕಾರಿಗಳಿಂದ ದೃಢೀಕರಣ ಪ್ರತಿಗಳನ್ನು ಲಗತ್ತಿಸಿ ಅಕ್ಟೋಬರ್ 20, 2024 ರೊಳಗಾಗಿ ಪಶುವೈದ್ಯಕೀಯ ಸಂಸ್ಥೆಗಳಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿ ದೂರವಾಣಿ ಸಂಖ್ಯೆ 9845171789 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About Shaikh BigTv

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *