Breaking News

ಆರು ತಿಂಗಳಲ್ಲಿ ಸರ್ಕಾರದ ಗುರಿಗಿಂತ 10 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹಣೆ ಕಡಿಮೆ: ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ನಂತರ 2024-25ನೇ ಸಾಲಿನ ಆರ್ಥಿಕ ವರ್ಷದ ಮೊದಲ ಆರು ತಿಂಗಳಲ್ಲಿ ಸರ್ಕಾರದ ಗುರಿಗಿಂತ ಸುಮಾರು 10,000 ಕೋಟಿ ರೂ. ತೆರಿಗೆ ಸಂಗ್ರಹಣೆ ಕಡಿಮೆ ಆಗಿದೆ. ಇದು ರಾಜ್ಯದ ಆರ್ಥಿಕ ಸ್ಥಿತಿಗತಿಗೆ ಹಿಡಿದ ಕನ್ನಡಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್ ಅವರು, ರಾಜ್ಯ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಾಗಿನಿಂದ ದಿನೇ ದಿನೇ ರಾಜ್ಯದ ಆರ್ಥಿಕ ಪರಿಸ್ಥಿತಿ ಕ್ಷೀಣಿಸುತ್ತಿದೆ ಎಂದು ಲಭ್ಯ ವರದಿ ಉಲ್ಲೇಖಿಸಿ ಅವರು ಮಾತನಾಡಿದ್ದಾರೆ.
ರಾಜ್ಯದಲ್ಲಿ ಸರ್ಕಾರ ಬಂದು 17 ತಿಂಗಳು ಆಗಿದೆ ದಿನ ಬೆಳಗಾದರೆ ಭ್ರಷ್ಟಾಚಾರ, ರಾಜಕೀಯ ಮೇಲಾಟ, ಕುರ್ಚಿ ಗುದ್ದಾಟ, ಆಂತರಿಕ ಕಲಹ, ಬಾಣ ಬಡಿದಾಟಗಳಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಳುಗಿ ಹೋಗಿದೆ. ಕಾಂಗ್ರೆಸ್‌ ಪಕ್ಷ ಸರ್ಕಾರದ ಆಡಳಿತವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿರುವ ಪರಿಣಾಮವಾಗಿ ಇಂದು ರಾಜ್ಯದ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ತಲುಪಿದೆ ಎಂದು ಅವರು ದೂರಿದರು.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *