Breaking News

ಭಾರತೀಯ ರೈಲ್ವೆಯನ್ನು ಖಾಸಗಿಕರಣಗೊಳಿಸುವುದಿಲ್ಲ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ನಾಸಿಕ್: ಭಾರತೀಯ ರೈಲ್ವೆಯನ್ನು ಖಾಸಗೀಕರಣಗೊಳಿಸುವುದಿಲ್ಲ ಎಲ್ಲರಿಗೂ ಕೈಗೆಟಕುವ ದರದಲ್ಲಿ ಸೇವೆ ಒದಗಿಸಲು ಗಮನಹರಿಸುತ್ತೆವೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು.
400 ರೂ.ಗಿಂತ ಕಡಿಮೆ ವೆಚ್ಚದಲ್ಲಿ 1,000 ಕಿಮೀವರೆಗೆ ಪ್ರಯಾಣ ಮಾಡಬಹುದು ಎಂಬುದನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರದ ಗುರಿ ಎಂದು ಸಚಿವರು ಮಹಾರಾಷ್ಟ್ರದ ನಾಸಿಕ್‌ನಲ್ಲಿ ಹೇಳಿದರು.
ಮುಂದಿನ ಐದು ವರ್ಷಗಳಲ್ಲಿ ರೈಲ್ವೆ ಸಂಪೂರ್ಣ ಬದಲಾವಣೆಗೆ ಒಳಗಾಗಲಿದೆ. ವಂದೇ ಭಾರತ್ ಮತ್ತು ನಮೋ ಭಾರತ್‌ನಂತಹ ರೈಲುಗಳು ಹಾಗೂ ಕವಚ ರೈಲು ರಕ್ಷಣೆ ಅಳವಡಿಕೆ ಬದಲಾವಣೆಗೆ ಕೊಡುಗೆ ನೀಡುತ್ತವೆ, ರೈಲ್ವೆ ಸಂರಕ್ಷಣಾ ಪಡೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ರೈಲ್ವೆಯ ಖಾಸಗೀಕರಣದ ಪ್ರಶ್ನೆಯೇ ಇಲ್ಲ ರೈಲ್ವೆ ಮತ್ತು ರಕ್ಷಣೆ ದೇಶದ ಬೆನ್ನೆಲುಬುಗಳಾಗಿದ್ದು, ಅವನ್ನು ರಾಜಕೀಯದಿಂದ ದೂರವಿಡಬೇಕು ಎಂದು ಇಂಥ ವದಂತಿ ಹಬ್ಬಿಸುವವರಿಗೆ ತಿಳಿಸಲು ಇಚ್ಛಿಸುತ್ತೇನೆ ಎಂದು ಹೇಳಿದರು.
ಕಾರ್ಯಕ್ಷಮತೆ, ಸುರಕ್ಷತೆ, ತಂತ್ರಜ್ಞಾನ ಮತ್ತು ಎಲ್ಲರಿಗೂ ಕೈಗೆಟಕುವ ದರದಲ್ಲಿ ಸೇವೆ ಒದಗಿಸುವತ್ತ ಗಮನ ಹರಿಸಲಾಗಿದೆ. ರೈಲ್ವೆ ಬಜೆಟ್ ಪ್ರಸ್ತುತ 2.5 ಲಕ್ಷ ಕೋಟಿ ರೂ. ಇದೆ. ಕಳೆದ 10 ವರ್ಷದಲ್ಲಿ 31,000 ಕಿಮೀ ಹೊಸ ಹಳಿ ಅಳವಡಿಸಲಾಗಿದೆ. ಇದು ಫ್ರಾನ್ಸ್‌ನ ಸಂಪೂರ್ಣ ರೈಲು ಜಾಲಕ್ಕಿಂತ ಅಧಿಕ ಎಂದು ಹೇಳಿದರು.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *