ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೊಳಿಸಿದ ಪಿಎಂ ಕಿಸಾನ್ ಸಮ್ಮಾನ್ ಯೋಜನೆ ರೈತರ ಸಂಜೀವಿನಿ ಆಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಕೇಂದ್ರ ಸರ್ಕಾರ ಪಿಎಂ ಕಿಸಾನ್ ಸಮ್ಮಾನ್ 18ನೇ ಕಂತಿನ ನಿಧಿ ರೈತರ ಖಾತೆಗೆ ನೇರ ವರ್ಗಾವಣೆಯಾದ ಬಳಿಕ ಪ್ರತಿಕ್ರಿಯಿಸಿರುವ ಸಚಿವರು, ಈ ಯೋಜನೆ ರೈತರಿಗೆ ಉತ್ತೇಜನ ನೀಡಿದೆ ಎಂದಿದ್ದಾರೆ ಎಂದರು.
ಕಿಸಾನ್ ಸಮ್ಮಾನ್ ಯೋಜನೆಯಡಿ ವರ್ಷಕ್ಕೆ 6000 ರೂ. ಧನಸಹಾಯ ನೀಡುವ ಮೂಲಕ ದೇಶದ 11 ಕೋಟಿ ರೈತರಿಗೆ ಸಂಜೀವಿನಿಯಾಗಿದೆ ಎಂದು ತಿಳಿಸಿರುವ ಅವರು, ಈ ಯೋಜನೆಯಿಂದಾಗಿ ದೇಶದಲ್ಲಿ ಕೃಷಿಗೆ ಅಪೂರ್ವ ಉತ್ತೇಜನ ದೊರಕಿದೆ. ರೈತರ ಸಾಲವನ್ನು ಕಡಿಮೆ ಮಾಡಿದೆ ಅಲ್ಲದೇ, ಗ್ರಾಮೀಣ ಪ್ರದೇಶದ ಸಮುದಾಯಗಳನ್ನು ಸಶಕ್ತರನ್ನಾಗಿಸಿದೆ ಎಂದು ಪ್ರತಿಪಾದಿಸಿದ್ದಾರೆ.
ಕೃಷಿ ಸಮ್ಮಾನ್ ಯೋಜನೆ ಭಾರತದ ಕೃಷಿಕರನ್ನು ಮಾತ್ರವಲ್ಲ ದೇಶವನ್ನೇ ಸ್ವಾವಲಂಬಿ ಮಾಡುವತ್ತ ಒಂದು ಮಹತ್ತರ ಹೆಜ್ಜೆಯಾಗಿದೆ ಎಂದು ಜೋಶಿ ಹೇಳಿದರು. ಕಿಸಾನ್ ಸಮ್ಮಾನ್ ಯೋಜನೆಯಡಿ 18ನೇ ಕಂತಿನಲ್ಲಿ ಒಟ್ಟು 9.4 ಕೋಟಿ ರೈತರಿಗೆ 20 ಸಾವಿರ ಕೋಟಿ ನೇರ ವರ್ಗಾವಣೆ ಮಾಡಲಾಗಿದೆ. ಕರ್ನಾಟಕದ 47.12 ಲಕ್ಷ ರೈತರು 942 ಕೋಟಿ ರೂ. ಪಡೆದಿದ್ದಾರೆ ಎಂದು ಸಚಿವ ಜೋಶಿ ಮಾಹಿತಿ ಹಂಚಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





