Breaking News

ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದು, ಈ ಮೂಲಕ ರೈತರಿಗೆ ಗುಡ್ ನ್ಯೂಸ್ ಕೊಟ್ಟಿದೆ.
ಈ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ನಿರ್ಧಾರ ಮಾಡಲಾಗಿದೆ.
ಸಾಗುವಳಿ ಮಾಡುತ್ತಿರುವರುವ 14 ಲಕ್ಷ ರೈತರು ಅರ್ಜಿ ಹಾಕಿದ್ದಾರೆ ಸರ್ಕಾರಿ ಭೂಮಿ ಸಕ್ರಮಗೊಳಿಸುವಂತೆ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಸಂಬಂಧ ತಹಶೀಲ್ದಾರ್​ಗಳ ಜೊತೆ ಸಭೆ ನಡೆಸಿದ್ದೇನೆ. ನಾಲ್ಕೈದು ತಿಂಗಳಲ್ಲಿ ಎಲ್ಲಾ ರೈತರ ಅರ್ಜಿ ಇತ್ಯರ್ಥ ಮಾಡಲು ಸೂಚನೆ ನೀಡಿರುವುದಾಗಿ ಹೇಳಿದ್ದಾರೆ.
ಈ ಬಾರಿ ಬಗರ್​ ಹುಕಂ ಕಮಿಟಿಯಲ್ಲಿ ಸಕ್ರಮದ ಜೊತೆ ಸಾಗುವಳಿ ಚೀಟಿ ಮತ್ತು ಭೂಮಿ ಸರ್ವೆ ಮಾಡಿ ರೈತರ ಹೆಸರಿಗೆ ನೋಂದಣಿ ಕೂಡ ಮಾಡಿಕೊಡುತ್ತೇವೆ. ರೈತರ ಎಲ್ಲಾ ದಾಖಲೆಗಳನ್ನು ಡಿಜಿಟಲ್ ಮಾಡಿಕೊಡುತ್ತೇವೆ ಎಂದು ತಿಳಿಸಿದ್ದಾರೆ.
ಹಿಂದೆ ಭೂಮಿ ಮಂಜೂರಾಗಿ ಪೋಡಿ ದುರಸ್ತಿ ಆಗದ 10 ಲಕ್ಷ ಪ್ರಕರಣಗಳಿವೆ. ಇವರೆಲ್ಲರ ದುರಸ್ತಿ ಪ್ರಕ್ರಿಕೆಯೆಗೆ ಚಾಲನೆ ನೀಡಿದ್ದೇವೆ ಎಂದು ಹೇಳಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *