Breaking News

ಕೃಷಿ, ಪಶುಸಂಗೋಪನಾ ಕ್ಷೇತ್ರದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದಲ್ಲಿ ಸುಮಾರು 23,300 ಕೋಟಿ ರೂಪಾಯಿ ಮೌಲ್ಯದ ಕೃಷಿ ಮತ್ತು ಪಶುಸಂಗೋಪನಾ ಕ್ಷೇತ್ರಕ್ಕೆ ಸಂಬಂಧಿಸಿದ ಯೋಜನೆಗಳಿಗೆ ವಾಶಿಮ್‌ನಲ್ಲಿ ಚಾಲನೆ ನೀಡಿದರು.
ಬಂಜಾರ ಸಮುದಾಯದ ಶ್ರೀಮಂತ ಪರಂಪರೆಯನ್ನು ಕೊಂಡಾಡುವ ಬಂಜಾರ ವಿರಾಸತ್ ಮ್ಯೂಸಿಯಂ ಅನ್ನು ಅವರು ಉದ್ಘಾಟಿಸಿದರು.
ಥಾಣೆಯಲ್ಲಿ 32,800 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಅವರು ನಮೋ ಶೇತ್ಕಾರಿ ಮಹಾಸನ್ಮಾನ್ ನಿಧಿ ಯೋಜನೆಯಡಿ ಮಹಾರಾಷ್ಟ್ರದ ರೈತರಿಗೆ ಸುಮಾರು ಎರಡು ಸಾವಿರ ಕೋಟಿ ರೂಪಾಯಿಗಳ ಹೆಚ್ಚುವರಿ ಯೋಜನೆಯನ್ನು ಬಿಡುಗಡೆ ಮಾಡಿದರು. 1,920 ಕೋಟಿ ರೂಪಾಯಿ ಮೌಲ್ಯದ ಕೃಷಿ ಮೂಲಸೌಕರ್ಯ ನಿಧಿಯಡಿಯಲ್ಲಿ 7, 500 ಕ್ಕೂ ಹೆಚ್ಚು ಯೋಜನೆಗಳನ್ನು ಪ್ರಧಾನಿ ಅವರು ದೇಶಕ್ಕೆ ಅರ್ಪಿಸಿದರು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *