Breaking News

ಹುಬ್ಬಳ್ಳಿಗೆ ಆಗಮಿಸಿದ ಧ್ರುವ ಸರ್ಜಾಗೆ ಅದ್ದೂರಿ ಸ್ವಾಗತ

ಹುಬ್ಬಳ್ಳಿ : ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಹುಬ್ಬಳ್ಳಿಗೆ ಆಗಮಿಸುತ್ತಿದ್ದಂತೆಯೇ ಅಭಿಮಾನಿಗಳು ವಾದ್ಯಗಳೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿದರು.
ಅಲ್ಲದೇ ಪುಷ್ಪ ಮಳೆಗರೆದು ಅಭಿನಂದನೆ ಸಲ್ಲಿಸಿದರು.

ಹುಬ್ಬಳ್ಳಿಯ ಹೃದಯ ಭಾಗದಲ್ಲಿ ಹೃದಯಪೂರ್ವಕ ಅಭಿನಂದನೆ ಸಲ್ಲಿಸಿರುವುದು ಹುಬ್ಬಳ್ಳಿಗೆ ಆಗಮಿಸಿದ ಸ್ಟಾರ್ ನಟನಿಗೆ ಸಲ್ಲಿಸಿದ ಗೌರವ ಇದಾಗಿದೆ. ಅಲ್ಲದೆ ನಟ ಧ್ರುವ ಸರ್ಜಾ ಅವರು ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಚಿತ್ರದ ಯಶಸ್ಸಿಗೆ ಮನವಿ ಮಾಡಿದರು.

ಇನ್ನೂ ಅಭಿಮಾನಿಗಳು ವಿನೂತನ ರೀತಿಯಲ್ಲಿ ಅಭಿಮಾನ ಪ್ರದರ್ಶನ ಮಾಡಿದ್ದು, ಅಭಿಮಾನಿಯೊಬ್ಬ ಡಿ.ಎಸ್ ಬಾಸ್ ಎಂಬುವಂತ ಟ್ಯಾಟೋ ಹಾಕಿಸಿಕೊಂಡು ಪ್ರದರ್ಶಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾನೆ. ಅಲ್ಲದೇ ಮಾರ್ಟಿನ್ ಚಿತ್ರದ ತಂಡ ಹುಬ್ಬಳ್ಳಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣ ಮಾಡಿದ್ದಂತೂ ಸತ್ಯ.

Share News

About Shaikh BigTv

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *