ಧಾರವಾಡ: ವಿದ್ಯಾರ್ಥಿಗಳ ವಸತಿ ನಿಲಯದಲ್ಲಿ ನೀಡಲಾಗುತ್ತಿರುವ ಊಟ ಸರಿಯಾಗಿಲ್ಲ ಎಂದು ಆರೋಪಿಸಿ ಸಪ್ತಾಪುರ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಹಾಸ್ಟೆಲ್‌ನ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ನೀಡಿದ ಅನ್ನ ಹಾಗೂ ಸಾಂಬಾರನ್ನು ಡಿಸಿ ಕಚೇರಿಗೆ ತಂದು ದಿಢೀರ್ ಪ್ರತಿಭಟನೆ ನಡೆಸಿದರು.
ಹಾಸ್ಟೆಲ್‌ನ ಅನ್ನದ ಪಾತ್ರೆ, ಸಾಂಬಾರಿನ ಬಕೆಟ್ ಹಿಡಿದು ಬಂದ ವಿದ್ಯಾರ್ಥಿಗಳು, ಅವುಗಳನ್ನು ಡಿಸಿ ಕಚೇರಿ ಮುಂದೆ ಇಟ್ಟು ಪ್ರತಿಭಟನೆ ನಡೆಸಿದರು. ಹಾಸ್ಟೆಲ್‌ನಲ್ಲಿ ನೀಡುತ್ತಿರುವ ಊಟ ಕಳಪೆ ಗುಣಮಟ್ಟದ್ದಾಗಿದ್ದು, ಈ ಹಿಂದೆಯೇ ಈ ಬಗ್ಗೆ ಪ್ರತಿಭಟನೆ ನಡೆಸಲಾಗಿತ್ತು. ಆದರೂ ಗುಣಮಟ್ಟದ ಊಟ ನೀಡಲಾಗುತ್ತಿಲ್ಲ ಎಂದು ಆಕ್ರೋಶಗೊಂಡ ವಿದ್ಯಾರ್ಥಿಗಳು ಇಂದು ಅನ್ನ ಹಾಗೂ ಸಾಂಬಾರನ್ನು ಧಾರವಾಡ ಡಿಸಿ ಕಚೇರಿ ಎದುರೇ ತಂದಿಟ್ಟು ಪ್ರತಿಭಟನೆ ನಡೆಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

