Breaking News

ದೇವರ ಮೂರ್ತಿ ಕೈ ಕತ್ತಿರಿಸಿದ ಕಿಡಿಗೇಡಿಗಳ ವಿರುದ್ಧ ಎಸ್.ಎಸ್ ಶಂಕರಣ್ಣ ಕಿಡಿ

ಹುಬ್ಬಳ್ಳಿ: ಹುಬ್ಬಳ್ಳಿಯ ದೇಶಪಾಂಡೆ ನಗರದ ದತ್ತಾತ್ರೇಯ ದೇವಸ್ಥಾನದಲ್ಲಿನ ದೇವರ ವಿಗ್ರಹದ ನಾಲ್ಕು ಕೈಗಳನ್ನು ಕಿಡಿಗೇಡಿಗಳು ಮುರಿದು ವಿರೂಪಗೊಳಿಸಿರುವುದು ಖಂಡನೀಯ. ಈ ವಿಕೃತ ಮನಸ್ಸು ಹೊಂದಿದವರನ್ನು ಪೊಲೀಸರು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಉತ್ತರ ಕರ್ನಾಟಕ ಜನಶಕ್ತಿ ಸೇನಾ ಸಂಸ್ಥಾಪಕ ಎಸ್.ಎಸ್ ಶಂಕರಣ್ಣ
ಒತ್ತಾಯಿಸಿದ್ದಾರೆ.

ಪ್ರತಿಯೊಬ್ಬ ಮನುಷ್ಯ ದೇವರಲ್ಲಿ ಚನ್ನಾಗಿಡಪ್ಪ ಎಂದು ಅಂಗಲಾಚಿ ಬೇಡಿಕೊಳ್ಳುತ್ತಾನೆ. ಆದ್ರೆ ಯಾರೋ ವಿಕೃತಿ ಹೊಂದಿದ ದುಷ್ಕರ್ಮಿಗಳು ದೇವರ ಮೂರ್ತಿಯ ಕೈ ಕತ್ತರಿಸಿ ಉದ್ವಿಗ್ನ ಸ್ಥಿತಿ ನಿರ್ಮಾಣ ಮಾಡಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ಮಾಡಿ ತಪ್ಪು ಮಾಡಿದವರಿಗೆ ತಕ್ಕ ಶಿಕ್ಷೆ ನೀಡಬೇಕೆಂದು ಉತ್ತರ ಕರ್ನಾಟಕ ಜನಶಕ್ತಿ ಸೇನಾ ಸಂಸ್ಥಾಪಕ ಎಸ್.ಎಸ್ ಶಂಕರಣ್ಣ ಆಗ್ರಹಿಸಿದ್ದಾರೆ.

Share News

About Shaikh BigTv

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *