ನವಲಗುಂದ: ತಾಲೂಕಾ ಮಟ್ಟದಲ್ಲಿ ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಹಶೀಲ್ದಾರ ಸುಧೀರ ಸಾಹುಕಾರ ಸೂಚನೆ ನೀಡಿದರು.
ಪಟ್ಟಣದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಸಂಬಂಧ ತಾಲೂಕಾಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಮುಖಂಡರೊಂದಿಗೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ತಾಲೂಕಾ ಆಡಳಿತ ವತಿಯಿಂದ ಅ.17 ರಂದು 11 ಗಂಟೆಗೆ ತಹಶೀಲ್ದಾರ್ ಕಚೇರಿಯಿಂದ ಮೆರವಣಿಗೆ ಹೊರಟು ಪಟ್ಟಣದ ಹೊರವಲಯದಲ್ಲಿರುವ ವಾಲ್ಮೀಕಿ ಭವನದಲ್ಲಿ ಮಹರ್ಷಿ ವಾಲ್ಮೀಕಿ ಅವರ ಜಯಂತಿ ಜರುಗಲಿದೆ ಎಂದರು.
ಜಯಂತಿ ಮೆರವಣಿಗೆಗೆ, ಪೊಲೀಸ್ ಬಂದೋಬಸ್ತ್, ವೇದಿಕೆ, ಆಸನ, ಕುಡಿಯುವ ನೀರು, ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಣ ಹಾಗೂ ವಿತರಣೆ, ಉಪಹಾರ, ಸನ್ಮಾನ, ಉಪನ್ಯಾಸಕ ಆಯ್ಕೆ ಮಾಡಲು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

