Breaking News

ಲೈಂಗಿಕ ಕಿರುಕುಳ ಪ್ರಕರಣ: ರಾಷ್ಟ್ರೀಯ ಪ್ರಶಸ್ತಿ ರದ್ದು

ನವದೆಹಲಿ: ದಕ್ಷಿಣ ಚಿತ್ರರಂಗದ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಕಳೆದ ಕೆಲವು ದಿನಗಳಿಂದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸುದ್ದಿಯಲ್ಲಿದ್ದಾರೆ. ಕಳೆದ ತಿಂಗಳು ಅವರ ಮೇಲೆ 21 ವರ್ಷದ ಯುವತಿ ಲೈಂಗಿಕ ಕಿರುಕುಳ ಆರೋಪ ಹೊರಿಸಿದ್ದು, ಸೆ.19 ರಂದು ಪೋಕೋ ಕಾಯ್ದೆಯಡಿ ಬಂಧಿಸಲಾಗಿದೆ. ಆದರೆ ಈಗ ಅವರ ರಾಷ್ಟ್ರೀಯ ಪ್ರಶಸ್ತಿಯನ್ನು ರದ್ದುಗೊಳಿಸಲಾಗಿದೆ.

ಜಾನಿ ಮಾಸ್ಟರ್ ಗೆ ರಾಷ್ಟ್ರೀಯ ಪ್ರಶಸ್ತಿ ಘೋಷಣೆಯಾಗಿದ್ದು, ಅಕ್ಟೋಬರ್ 8 ರಂದು ನವದೆಹಲಿಯ 9 ವಿಜ್ಞಾನ ಭವನದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಅವರಿಗೆ ಪ್ರದಾನ ಮಾಡಬೇಕಿತ್ತು. ಇದರ ನಡುವೆ ಜಾನಿ ಮಾಸ್ಟರ್ ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಅಕ್ಟೋಬರ್ 6 ರಿಂದ ಅಕ್ಟೋಬ‌ರ್ 10 ರವರೆಗೆ ಜಾಮೀನು ಸಹ ಪಡೆದಿದ್ದಾರೆ. ಆದರೆ ಈಗ ಅವರ ರಾಷ್ಟ್ರೀಯ ಪ್ರಶಸ್ತಿಯನ್ನು ರದ್ದುಗೊಳಿಸಲಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *