Breaking News

ಬಳ್ಳಾರಿ ಹೊಸಪೇಟೆ ರೈಲ್ವೆ ಅಭಿವೃದ್ಧಿಗೆ 6,200 ಕೋಟಿ ರೂ: ಕೇಂದ್ರ ಸಚಿವ ಸೋಮಣ್ಣ

ಬಳ್ಳಾರಿ: ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಬಳ್ಳಾರಿ ಹೊಸಪೇಟೆ ಭಾಗದಲ್ಲಿ ರೈಲ್ವೆ ಅಭಿವೃದ್ಧಿಗಾಗಿ 6,200 ಕೋಟಿ ರೂ. ವ್ಯಯಿಸಲಾಗುತ್ತಿದೆ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ ನೂತನ ಜಿಲ್ಲಾಡಳಿತ ಭವನದ ಕಚೇರಿ ಸಭಾಂಗಣದಲ್ಲಿ ರೈಲ್ವೆ ಇಲಾಖೆ ಅಧಿಕಾರಿಗಳು ಮತ್ತು ಕಂದಾಯ ಇಲಾಖೆ ಅಧಿಕಾರಿಗಳ ಜೊತೆ ನಡೆದ ಪ್ರಗತಿ ಪರಿಶೀಲನಾ ಸಭೆಯ ನಂತರ, ಸುದ್ದಿಗಾರರಿಗೆ ಈ ಮಾಹಿತಿ ನೀಡಿದರು.
ಯೋಜನೆಗಳ ಸರ್ವೇ ಪೂರ್ಣಗೊಂಡಿದೆ. ಕೆಲ ಯೋಜನೆಗಳ ಡಿಪಿಆರ್ ಸಿದ್ಧವಾಗುತ್ತಿದೆ. ಅಮೃತ್ ಭಾರತ್ ರೈಲ್ವೆ ನಿಲ್ದಾಣ ಯೋಜನೆಯಡಿ ಬಳ್ಳಾರಿ ರೈಲ್ವೆ ನಿಲ್ದಾಣಕ್ಕೆ 16.66 ಕೋಟಿ ರೂ. ಮತ್ತು ಹೊಸಪೇಟೆ ರೈಲ್ವೆ ನಿಲ್ದಾಣಕ್ಕೆ 15.17 ಕೋಟಿ ರೂ. ಅನುದಾನದಲ್ಲಿ ನಿಲ್ದಾಣಗಳನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದು ಹೇಳಿದರು.
ಬಳ್ಳಾರಿ ಚಿಕ್ಕಜಾಜೂರು ಮಾರ್ಗದ 185 ಕಿ.ಮೀ ಉದ್ದದ ರೈಲ್ವೆ ಹಳಿ ಡಬ್ಲಿಂಗ್‍ಗೆ 3,080 ಕೋಟಿ ರೂ. ಖರ್ಚು ಮಾಡಲಾಗುತ್ತಿದ್ದು, ಇನ್ನೆರಡು ವರ್ಷದಲ್ಲಿ ಕಾಮಗಾರಿ ಪೂರ್ಣಗೊರ್ಳಳಲಿದೆ. ಸ್ವಾಮಿಹಳ್ಳಿ ರಾಯದುರ್ಗ ಮಾರ್ಗದ 52 ಕಿ.ಮೀ ಉದ್ದದ ರೈಲ್ವೆ ಹಳಿ ಡಬ್ಲಿಂಗ್‍ಗೆ ತಾಂತ್ರಿಕ ಪರಿಶೀಲನೆ ನಡೆಸಲಾಗಿದ್ದು, ಶೀಘ್ರದಲ್ಲೇ ಡಿಪಿಆರ್ ಸಿದ್ದಪಡಿಸಲಾಗುವುದು ಎಂದು ತಿಳಿಸಿದರು.
ಬಳ್ಳಾರಿ ಹೊಸಪೇಟೆ ಮಾರ್ಗದಲ್ಲಿ ನಾಲ್ಕು ಟ್ರ್ಯಾಕ್ ಹಳಿಯ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಈಗಾಗಲೇ ಸರ್ವೇ ಕಾರ್ಯ ಪೂರ್ಣಗೊಂಡಿದ್ದು, ಡಿಪಿಆರ್ ಸಿದ್ದಗೊಳ್ಳುತ್ತಿದೆ. ಈ ಭಾಗದ ವಿವಿಧ ಕಾರ್ಖಾನೆಗಳಿಗೆ ರೈಲ್ವೆ ಅಭಿವೃದ್ಧಿಗೆ ಸುಮಾರು 3 ಸಾವಿರ ಕೋಟಿ ರೂ. ವ್ಯಯಿಸಲಾಗುತ್ತದೆ.
ರಾಜ್ಯದಲ್ಲಿ ಒಟ್ಟು 21 ರೈಲ್ವೆ ಯೋಜನೆಗಳು ನಡೆಯುತ್ತಿದ್ದು, ಇದಕ್ಕಾಗಿ 43 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತದೆ. ಈ ಎಲ್ಲಾ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ ರಾಜ್ಯವನ್ನು ರೈಲ್ವೆ ಸೌಕರ್ಯ ಹೊಂದಿದ ರಾಜ್ಯವನ್ನಾಗಿ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *