Breaking News

ದಲಿತ ಮುಖ್ಯಮಂತ್ರಿಗಾಗಿ ನನ್ನ ಜೀವನ ಇರೋವರೆಗೂ ಹೋರಾಟ: ಸಂಸದ ರಮೇಶ ಜಿಗಜಿಣಗಿ

ಇಂಡಿ: ನನ್ನ ಜೀವನ ಇರುವವರೆಗೂ ದಲಿತ ಮುಖ್ಯಮಂತ್ರಿಗಾಗಿ ಒತ್ತಾಯ ಇದ್ದೇ ಇರುತ್ತದೆ ಕಾಂಗ್ರೆಸ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ ಆದರೂ ಸಂತೋಷ, ದಲಿತರು ಯಾರೇ ಆದರೂ ಸಂತೋಷ. ಎಲ್ಲ ರಾಜ್ಯಗಳಲ್ಲಿ ದಲಿತ ಮುಖ್ಯಮಂತ್ರಿ ಆಗಿ ಹೋಗಿದ್ದಾರೆ. ನಮ್ಮ ರಾಜ್ಯದಲ್ಲಿ ಏಕೆ ದಲಿತ ಮುಖ್ಯಮಂತ್ರಿ ಆಗಬಾರದು, ಬಿಜೆಪಿಯಲ್ಲಿಯೂ ದಲಿತ ಮುಖ್ಯಮಂತ್ರಿ ಮಾಡುವಂತೆ ಕೇಳುತ್ತೇನೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ರಾಜನಾಳ ಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗ್ಯಾರಂಟಿ ಯೋಜನೆಗಳು ಚುನಾವಣೆಗಾಗಿ ಮಾಡಿಲ್ಲ ಎಂದು ಹೇಳುತ್ತಿದ್ದಾರೆ. ಹಾಗಾದಾರೆ ಗ್ಯಾರಂಟಿ ಯೋಜನೆಗಳ ಬಗ್ಗೆ ಚುನಾವಣೆ ಮುಗಿದ ಮೇಲೆ ಹೇಳಬೇಕಿತ್ತು. ಚುನಾವಣೆ ಸಂದರ್ಭದಲ್ಲಿಯೇ ಏಕೆ ಘೋಷಣೆ ಮಾಡಿದರು ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದು ಒಂದೂವರೆ ವರ್ಷವಾಯಿತು ರಾಜ್ಯದಲ್ಲಿ ಯಾವುದೇ ಒಂದೇ ಒಂದು ಅಭಿವೃದ್ಧಿ ಕೆಲಸಗಳು ನಡೆದಿಲ್ಲ ಎಂದು ಟೀಕಿಸಿದರು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *