Breaking News

ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ಹಾಗೂ ಬಸ್ ನಡುವೆ ಅಪಘಾತ

ಕಲಘಟಗಿ : ತಾಲೂಕಿನ ಧಾರವಾಡ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು ಆಟೋದಲ್ಲಿದ್ದ ಚಾಲಕನ ಮಗಳು ಹಾಗೂ ಮಗನಿಗೂ ಗಾಯಗಳಾಗಿವೆ.

ಆಟೋ ಚಾಲಕ ಕಲಘಟಗಿ ಮೂಲದವನಾಗಿದ್ದು ಗಣೇಶ ಭಾಪಶೇಟ್ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯಲ್ಲಿ ವಾಸವಾಗಿದ್ದ ಇವರು ಮಕ್ಕಳನ್ನು ಕರೆದುಕೊಂಡು ಕಲಘಟಗಿ ಬಂದು ಹೋಗುತ್ತಿರುವಾಗ ಘಟನೆ ಸಂಭವಿಸಿದೆ.

ಗಾಯಗೊಂಡ ಮೂವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಸ್ಥಳಕ್ಕೆ ಪೊಲೀಸ್ ಸಿಬ್ಬಂದಿಗಳು ಆಗಮಿಸಿದ್ದು ತನಿಖೆ ನಡೆಸಿದ್ದಾರೆ.

Share News

About Shaikh BigTv

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *