ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಹತ್ವದ ಸಭೆ ಕರೆದ ಮಾಜಿ ಉಪಮುಖ್ಯಮಂತ್ರಿ, ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಬಗ್ಗೆ ಮಹತ್ವದ ಸಭೆ ನಡೆಸಿದ್ದಾರೆ.
ಈ ಹಿಂದೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪಿಸುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಇದೀಗ ರಾಯಣ್ಣ ಚೆನ್ನಮ್ಮ ಬ್ರಿಗೇಡ್(ಆರ್‌ಸಿಬಿ) ಸ್ಥಾಪಿಸಿಸಲು ಹೊರಟಿದ್ದಾರೆ.
ರಾಜ್ಯದ 40ಕ್ಕೂ ಪ್ರಮುಖರ ನೇತೃತ್ವದಲ್ಲಿ ನಡೆಯುತ್ತಿರುವ ಪೂರ್ವಭಾವಿ ಸಭೆಯು ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ನಡೆಯುತ್ತಿದೆ. ಈಗಾಗಲೇ ರಾಜ್ಯಾದ್ಯಂತ ಬ್ರಿಗೇಡ್ ಸ್ಥಾಪನೆ ಬಗ್ಗೆ ಸಾಕಷ್ಟು ಚರ್ಚೆ ನಡೆದಿದ್ದು, ಕೆಲವು ದಿನಗಳ ಹಿಂದೆ ಹುಬ್ಬಳ್ಳಿಯಿಂದಲೇ ಬಿಜೆಪಿಯನ್ನು ಗಂಗಾಜಲದಿಂದ ಸ್ವಚ್ಛ ಮಾಡುತ್ತೆವೆಂದಿದ್ದ ಯತ್ನಾಳ. ಅಲ್ಲದೇ ರಾಜ್ಯ ಬಿಜೆಪಿಗೆ ಶುದ್ದೀಕರಣದ ಅವಶ್ಯಕತೆ ಎಂದಿದ್ದ ಕೆ.ಎಸ್.ಈಶ್ವರಪ್ಪ, ಯತ್ನಾಳ, ಈಶ್ವರಪ್ಪ ಹೇಳಿಕೆ ಬೆನ್ನಲ್ಲೇ ಅಲರ್ಟ್ ಆಗಿದ್ದ ಬಿಜೆಪಿ ಹೈಕಮಾಂಡ್. ರಾತ್ರೋರಾತ್ರಿ ಬಂದು ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಿದ್ದ ವಿರೋಧ ಪಕ್ಷದ ನಾಯಕ ಆರ್.ಅಶೋಕ. ಇದರ ನಡುವೆ ಹುಬ್ಬಳ್ಳಿಯಿಂದಲೇ ಆರ್‌ಸಿಬಿ ರಣಕಹಳೆ ಮೊಳಗಿಸಲು ಹೊರಟ ಈಶ್ವರಪ್ಪ ನಡೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

