ಮೈಸೂರು: ರೈತರ ಜಾನುವಾರುಗಳಿಗೆ ವಿಮೆ ಸೌಲಭ್ಯ ಒದಗಿಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.
ದಸರಾ ಮಹೋತ್ಸವದ ಅಂಗವಾಗಿ ನಗರದ ಜೆ.ಕೆ. ಮೈದಾನದಲ್ಲಿರುವ ಎಂಎಂಸಿ ಅಮೃತ ಮಹೋತ್ಸವ ಭವನದಲ್ಲಿ ನಡೆದ ರೈತ ದಸರಾ ವೇದಿಕೆ ಕಾರ್ಯಕ್ರಮವನ್ನು ನವಧಾನ್ಯ ಸುರಿದು, ಹೊಂಬಾಳೆಯನ್ನು ಬಿಡಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಹೊಸ ಹೊಸ ಯೋಜನೆಗಳು ರೈತರಿಗೆ ಸಹಕಾರಿಯಾಗುತ್ತಿದ್ದು, ಮುಂದೆ ರೈತರ ಜಾನುವಾರುಗಳಿಗೆ ವಿಮೆಯನ್ನು ಜಾರಿಗೆ ತರಲು ಚಿಂತನೆ ನಡೆಸಲಾಗುತ್ತದೆ ಎಂದರು.
ಕೆಲವು ರೈತರು ಸಾಕಿರುವ ಹಳ್ಳಿಕಾರ್ ಎತ್ತುಗಳಿಗೆ 8 ರಿಂದ 10 ಲಕ್ಷ ಇದೆ. ಆಕಸ್ಮಿಕವಾಗಿ ಅವು ಮೃತಪಟ್ಟರೆ ರೈತರಿಗೆ ಆ ನಷ್ಟ ಭರಿಸಲಾಗಲ್ಲ. ಹೀಗಾಗಿ, ವಿಮೆಯನ್ನು ಜಾರಿಗೆ ತರುವಂತೆ ವೇದಿಕೆಯಲ್ಲಿದ್ದ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರಲ್ಲಿ ಮನವಿ ಮಾಡಿದ ಅವರು, ಈ ವಿಚಾರವನ್ನು ಮುಖ್ಯಮಂತ್ರಿ ಜೊತೆ ಚರ್ಚಿಸಿ ಜಾರಿಗೆ ತರುವ ಕೆಲಸವನ್ನು ಮಾಡುತ್ತೇವೆ ಎಂದು ಭರವಸೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





