ಕೂಡ್ಲಿಗಿ: ಹೊಸಪೇಟೆ, ಬಳ್ಳಾರಿ, ಸಂಡೂರು ವ್ಯಾಪ್ತಿಯ 530 ಚ.ಕಿ.ಮೀ. ವ್ಯಾಪ್ತಿಯಲ್ಲಿ ಕೈಗಾರಿಕೆಗಳು, ತರಬೇತಿ ಕೇಂದ್ರಗಳು, ಉತ್ತಮ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಚೀನಾದ ಬೀಜಿಂಗ್‌ನಂತೆ ಭಾರತದಲ್ಲಿ ಬಳ್ಳಾರಿಯನ್ನು ಮಿಂಚುವಂತೆ ಮಾಡುವ ಕನಸಿದೆ ಎಂದು ಗಂಗಾವತಿ ಶಾಸಕ ಜಿ.ಜನಾರ್ದನ ರೆಡ್ಡಿ ತಿಳಿಸಿದರು.
ಹಲವು ವರ್ಷಗಳ ನಂತರ ಮೊದಲ ಬಾರಿಗೆ ಕೂಡ್ಲಿಗಿ ಪಟ್ಟಣಕ್ಕೆ ಆಗಮಿಸಿದ ಶಾಸಕ ಜನಾರ್ದನ ರೆಡ್ಡಿ, ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ನಿವಾಸದಲ್ಲಿ ನಡೆದ ಮುಖಂಡರ ಸಭೆಯಲ್ಲಿ ಮಾತನಾಡಿದರು.
ನನ್ನನ್ನು ಸುಳ್ಳು ಕೇಸುಗಳಿಂದ ಬಂಧಿಸಿ, ನೋವು ನೀಡಲಾಯಿತು. 2004ರ ಲೋಕಸಭಾ ಚುನಾವಣೆಯಲ್ಲಿ ಕರುಣಾಕರ ರೆಡ್ಡಿ ಸ್ಪರ್ಧಿಸಿದ್ದಾಗ ಕೂಡ್ಲಿಗಿ ಕ್ಷೇತ್ರದ ಜನತೆ ತೋರಿದ ಪ್ರೀತಿಯನ್ನು ಮರೆಯುವುದಿಲ್ಲ. ಕೂಡ್ಲಿಗಿ ತಾಲೂಕು ಸೇರಿದಂತೆ ಅಖಂಡ ಬಳ್ಳಾರಿ ಜಿಲ್ಲೆಗೆ ಬಾರದಂತೆ ಮಾಡಿರುವ ನೋವನ್ನು ತೀರಿಸಿಕೊಳ್ಳಬೇಕಿದೆ. ಇನ್ಮುಂದೆ ನಿಮ್ಮ ಸೇವೆಗೆ ಸದಾ ಸಿದ್ಧ. ಹಾಗಾಗಿ, 2028ರ ಚುನಾವಣೆಯಲ್ಲಿ ಕೂಡ್ಲಿಗಿ ಸೇರಿ ಎಲ್ಲೆಲ್ಲೂ ಬಿಜೆಪಿಯನ್ನು ಗೆಲ್ಲಿಸುವಂತಾಗಬೇಕು ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

