Breaking News

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಕಾಲ ಸನ್ನಿಹಿತವಾಗಿದೆ: ಬಿ ವೈ ವಿಜಯೇಂದ್ರ

ಬೆಂಗಳೂರು: ಮುಡಾ ಪ್ರಕರಣದಿಂದ ಸರ್ಕಾರಕ್ಕೆ ಸಾಕಷ್ಟು ಮುಜುಗರವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಕಾಲ ಸನ್ನಿಹಿತವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜ ಯೇಂದ್ರ ಪುನರುಚ್ಚರಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತಾರೂಢ ಕಾಂಗ್ರೆಸ್‌‍ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದರೆ ಸರ್ಕಾರ ಯಾವುದೇ ಸಂದರ್ಭದಲ್ಲೂ ಬೀಳಬಹುದು. ಸಿದ್ದರಾಮಯ್ಯನವರು ಈಗಲಾದರೂ ಬಂಡತನ ಬಿಟ್ಟು ತಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಅದೇನೋ ಕಟ್ಟಡದ ನಕ್ಷೆಯನ್ನು ಹಿಡಿದುಕೊಂಡು ಅವರಿಗೆ ವಿವರಣೆ ನೀಡುತ್ತಿದ್ದರು. ಮತ್ತೊಂದು ಕಡೆ ಅನೇಕರು ರಹಸ್ಯ ಸಭೆಗಳನ್ನು ನಡೆಸುತ್ತಿದ್ದಾರೆ. ಇವೆಲ್ಲವನ್ನೂ ಗಮನಿಸಿದರೆ ಸರ್ಕಾರ ಉಳಿಯುತ್ತದೆ ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯನವರಿಗೆ ಗೌರವ ಇದ್ದರೆ ಮೊದಲು ರಾಜೀನಾಮೆ ಕೊಡಿ. ರಾಜ್ಯದಲ್ಲಿ ಒಂದು ರೀತಿ ಅರಾಜಕತೆ ಸೃಷ್ಟಿಯಾಗಿದೆ. ಕೆಲವರು ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡುತ್ತಾರೆ. ವಾಲ್ಮೀಕಿ ಮತ್ತು ಮುಡಾ ಪ್ರಕರಣ ತನಿಖೆಯಾಗಬೇಕು. ಡಿ.ಕೆ.ಶಿವಕುಮಾರ್‌ ಪ್ಲಾನ್‌ ಹಾಕಿಕೊಂಡೇ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.

Share News

About BigTv News

Check Also

ಅಪ್ರಾಪ್ತ ವಯಸ್ಕ ಬಾಲಕಿ ಮೇಲಿನ ದೌರ್ಜನ್ಯ ಕೇಸ್: ಗ್ರಾಮದಲ್ಲಿ ಉದ್ವಿಗ್ನ ವಾತಾವರಣ, ಆರೋಪಿ ಮನೆ ಮೇಲೆ ದಾಳಿ

ಮುಂಡಗೋಡ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ ಆರೋಪದ ಮೇಲೆ 65 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *