Breaking News

ಪಶ್ಚಿಮ ಬಂಗಾಳದ ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ: 7 ಮಂದಿ ಸಾವು

ಪಶ್ಚಿಮ ಬಂಗಾಳ: ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು ಹಲವಾರು ಮಂದಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದೆ.
ಬೀರ್ಭೂಮ್‌ನ ಲೋಕಪುರ ಪ್ರದೇಶದಲ್ಲಿರುವ ಗಂಗಾರಾಮ್‌ಚಕ್ ಮೈನಿಂಗ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯಲ್ಲಿ ಕಲ್ಲಿದ್ದಲು ಹೊರತೆಗೆಯಲು ಸ್ಫೋಟ ನಡೆಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನೆ ನಡೆಯುವ ಸಂದರ್ಭದಲ್ಲಿ ಹಲವಾರು ಕಾರ್ಮಿಕರು ಮತ್ತು ಹಿರಿಯ ಅಧಿಕಾರಿಗಳು ಸುರಕ್ಷಿತ ಸ್ಥಳಗಳಿಗೆ ಓಡಿ ತಮ್ಮ ಜೀವ ಉಳಿಸಿಕೊಂಡಿದ್ದಾರೆ ಆದರೆ ದುರದೃಷ್ಟವಶಾತ್ ಸ್ಫೋಟದಲ್ಲಿ ಸುಮಾರು ಏಳು ಮಂದಿಯ ದೇಹ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಸ್ಥಿತಿಯಲ್ಲಿ ಕಂಡುಬಂದಿದ್ದು ಜೊತೆಗೆ ಹಲವಾರು ಕಾರ್ಮಿಕರು ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಬಂದು ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯ ಮಾಡಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *