ಕುಂದಗೋಳ: ದುಶ್ಚಟದಿಂದ ಮುಕ್ತಗೊಳಿಸಿ ಸನ್ಮಾರ್ಗದ ಜೀವನಕ್ಕೆ ಮಾರ್ಗದರ್ಶನ ಮಾಡುವ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮವೊಂದು ಕುಂದಗೋಳ ಪಟ್ಟಣದಲ್ಲಿ ಹಬ್ಬದಂತೆ ಜರುಗಿತು.
ಕಳೆದ ಹಲವು ವರ್ಷಗಳಲ್ಲಿ 37 ಜಿಲ್ಲಾ ವೇದಿಕೆ ಸ್ಥಾಪಿಸಿ 10 ಸಾವಿರಕ್ಕೂ ಅಧಿಕ ಸ್ವಯಂಸೇವಕರ ನೇತೃತ್ವದಲ್ಲಿ 1.25 ಲಕ್ಷಕ್ಕೂ ಅಧಿಕ ಮದ್ಯ ವ್ಯಸನಿಗಳನ್ನು ವ್ಯಸನದಿಂದ ಮುಕ್ತಗೊಳಿಸಿ ಕುಂದಗೋಳದಲ್ಲಿ ಅಂತಹುದೇ ಮತ್ತೊಂದು ಕಾರ್ಯಕ್ರಮ ಏರ್ಪಡಿಸಿದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಮಾಡಲಾಯಿತು.
ಈ ಕಾರ್ಯಕ್ರಮವನ್ನು ಅಭಿನವ ಕಲ್ಯಾಣಪುರ ಬಸವಣ್ಣಜ್ಜನವರ ಮತ್ತು ಶಿವಾನಂದ ಮಠದ ಮಹಾಂತ ಶ್ರೀಗಳ ನೇತೃತ್ವದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮತ್ತು ಅಖಿಲ ಭಾರತ ಜನಜಾಗೃತಿ ವೇದಿಕೆ ಮುಖೇನ ಮಹಾತ್ಮಾ ಗಾಂಧಿ ಜಯಂತಿ ಅಂಗವಾಗಿ ಕೈಗೊಳ್ಳಲಾಯಿತು.
ಗಾಳಿ ಮರೇಮ್ಮ ದೇವಿ ದೇವಸ್ಥಾನದಿಂದ ಜಾಥಾ ಹೊರಟು ಮೂರಂಗಡಿ ಕೂಟ್ ತಲುಪಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸವಾಯಿ ಗಂಧರ್ವರ ಸ್ಮಾರಕ ಭವನದಲ್ಲಿ ಅದ್ದೂರಿ ವೇದಿಕೆ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಶಾಸಕ ಎಂ.ಆರ್.ಪಾಟೀಲ್ ಚಾಲನೆ ನೀಡಿದರು.ಇತರರು ಭಾಗಿಯಾಗಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

