Breaking News

ಬಡವರಿಗೆ ಹಿಂದುಳಿದ ವರ್ಗದ ಜನರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಹೊಸ ಸಂಘಟನೆ ಹುಟ್ಟುಹಾಕಲಾಗಿದೆ: ಕೆ.ಎಸ್.ಈಶ್ವರಪ್ಪ

ಹುಬ್ಬಳ್ಳಿ: ಹಿಂದೂಳಿದ, ದಲಿತ ಸೇರಿದಂತೆ ಎಲ್ಲ ಸಮಾಜದವರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ, ಧ್ವನಿಯಾಗಲು ಸಾಧುಸಂತರ ನೇತೃತ್ವದಲ್ಲಿ ನೂತನ ಸಂಘಟನೆಯನ್ನು ಹುಟ್ಟುಹಾಕಲು ಚಿಂತಿಸಲಾಗಿದೆ. ಅಕ್ಟೋಬರ್ 20ರಂದು ಬಾಗಲಕೋಟೆಯಲ್ಲಿ ನಡೆಯುವ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಡವರಿಗೆ ಹಿಂದುಳಿದ ವರ್ಗದ ಜನರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಹೊಸ ಸಂಘಟನೆ ಹುಟ್ಟುಹಾಕಲಾಗಿದೆ. ಈ ಸಭೆಯಲ್ಲಿ 25 ಕ್ಕೂ ಹೆಚ್ಚು ಸಾಧು – ಸಂತರು, ಸಾವಿರಕ್ಕೂ ಅಧಿಕ ವಿವಿಧ ಸಮಾಜದ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದರು.

ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಸಂಘಟನೆಗೆ ರಾಯಣ್ಣ, ಚನ್ನಮ್ಮ ಬ್ರಿಗೇಡ್ ಹೆಸರಿಡಲು ಸಲಹೆ ನೀಡಿದ್ದಾರೆ. ಈ ಕುರಿತು ಅಂದಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

Share News

About Shaikh BigTv

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *