Breaking News

ಕಂದಾಯ ಇಲಾಖೆಯು ಎಲ್ಲ ಇಲಾಖೆಗಳ ಮಾತೃ ಇಲಾಖೆ: ಸುಧೀರ ಸಾಹುಕಾರ

ನವಲಗುಂದ: ಕಂದಾಯ ಇಲಾಖೆಯು ಎಲ್ಲ ಇಲಾಖೆಗಳ ಮಾತೃ ಇಲಾಖೆ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಕಂದಾಯ ಇಲಾಖೆ ನೌಕರರೂ ಸಹ ಮಾತೃ ಹೃದಯದಿಂದ ಜನಸೇವೆಗೆ ಮುಂದಾಗಬೇಕು ಎಂದು ತಹಸೀಲ್ದಾರ ಸುಧೀರ ಸಾಹುಕಾರ ಕಿವಿಮಾತು ಹೇಳಿದರು.

ಅವರು ತಹಸೀಲ್ದಾರ ಕಚೇರಿ ಸಭಾಂಗಣದಲ್ಲಿ ನೂತನವಾಗಿ ರಚನೆಯಾದ ಕಂದಾಯ ಇಲಾಖೆಯ ನೌಕರರ ಸಂಘ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಪದಾಧಿಕಾರಿಗಳ ಆಯ್ಕೆ ಹಾಗೂ ಸನ್ಮಾನ ಸಮಾರಂಭ ಉದ್ದೇಶಿಸಿ ಮಾತನಾಡಿದ ಅವರು ಕಂದಾಯ ಇಲಾಖೆ ಪ್ರತಿದಿನ ಒಂದಲ್ಲಾ ಒಂದು ರೀತಿಯಲ್ಲಿ ಜನರ ಜೊತೆ ಸಂಪರ್ಕ ಹೊಂದಿರುವ ಈ ಕಂದಾಯ ಇಲಾಖೆಯಲ್ಲಿ ಸೇವೆ ಮಾಡಲು ನಿಮಗೆ ಅವಕಾಶ ಸಿಕ್ಕಿದೆ ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಿ ಎಂದರು.

ಕಂದಾಯ ಇಲಾಖೆ ನೌಕರರ ಸಂಘದ ಗೌರವಾಧ್ಯಕ್ಷರಾಗಿ ಕೃಷ್ಣಾಜಿ ಆರೇರ. ಅಧ್ಯಕ್ಷರಾಗಿ ವಾಯ್.ಎನ್‌.ಸವದತ್ತಿ, ಉಪಾಧ್ಯಕ್ಷರಾಗಿ ಪ್ರಶಾಂತ ತಳವಾರ ಹಾಗೂ ತಾಲ್ಲೂಕಿನ ಕಂದಾಯ ಇಲಾಖೆಯ ನೌಕರರ ಗ್ರಾಮ ಆಡಳಿತ ಅಧಿಕಾ ರಿಗಳ ಸಂಘದ ಅಧ್ಯಕ್ಷರಾಗಿ ಎಚ್.ವಿ.ಚಿಕ್ಕನರಗುಂದ ಉಪಾಧ್ಯಕ್ಷರಾಗಿ ಮಹಾದೇವಿ ಬಿಜ್ಜರಗಿ, ಖಚಾಂಚಿ ಸತೀಶ ಕೋರೆ, ಕ್ರೀಡಾ ಕಾರ್ಯದರ್ಶಿ ರೇವಣಸಿದ್ಧ ಡೆಂಗಿ ಅವಿರೋಧ ಆಯ್ಕೆ ಇವರುಗಳನ್ನು ಸನ್ಮಾನಿಸಲಾಯಿತು.

Share News

About Shaikh BigTv

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *