ಬೆಂಗಳೂರು: ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ನಿಟ್ಟಿನಲ್ಲಿ 34,863 ಖಾಲಿ ಹುದ್ದೆಗಳನ್ನು ಕಾಲ ಮಿತಿಯಲ್ಲಿ ಭರ್ತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿವಿಧ ಇಲಾಖೆಗಳ ನೇಮಕಾತಿ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ಮಾತನಾಡಿದ ಅವರು, 371ಜೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳ ಭರ್ತಿ ಕುರಿತು ಸೂಚನೆ ನೀಡಿದ್ದಾರೆ. 2023ರಲ್ಲಿ ಹೊರಡಿಸಿರುವ ಸುತ್ತೋಲೆ ಅನುಸರಿಸುವ ಕುರಿತು ಕ್ರಮಕ್ಕೆ ಆದೇಶಿಸಿದ್ದಾರೆ.
ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್‌ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಬೇಕು. ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಕಳೆದ ವಾರ ಎಲ್ಲಾ ನೇಮಕಾತಿ ಪ್ರಾಧಿಕಾರಗಳ ಸಭೆಯನ್ನು ನಡೆಸಲಾಗಿದೆ. ಸಭೆಯಲ್ಲಿ ಕೈಗೊಂಡಿರುವ ಶಿಫಾರಸುಗಳನ್ನು ಪರಿಶೀಲಿಸಿ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ 41 ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಯಾಗದ ಕಾರಣ ನೇಮಕಾತಿ ವಿಳಂಬವಾಗುತ್ತಿದೆ. ಕೆಲವು ಇಲಾಖೆಗಳಲ್ಲಿ ಹಲವು ದಶಕಗಳಿಂದ ಸಿ ಅಂಡ್ ಆರ್ ತಿದ್ದುಪಡಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳಿಗೆ ಅನುಕೂಲವಾಗುವಂತೆ ಮಾದರಿ ಸಿ ಅಂಡ್ ಆರ್ ಸಿದ್ಧಪಡಿಸಬೇಕು ಎಂದು ಸಭೆಯಲ್ಲಿ ಸೂಚನೆ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

