Breaking News

ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚುಯಿಟಿ ಬಗ್ಗೆ ಚರ್ಚೆ: ಕೇಂದ್ರ ಸಚಿವ ಸೋಮಣ್ಣ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚುಯಿಟಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಬಗ್ಗೆ ಚರ್ಚಿಸಲು ಕೇಂದ್ರಕ್ಕೆ ನಿಯೋಗವನ್ನು ಕರೆದೊಯ್ಯುತ್ತೇನೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅಂಗವಾಡಿ ಕಾರ್ಯಕರ್ತೆಯರಿಗೆ ಭರವಸೆ ನೀಡಿದರು.
ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ನಗರದ ಶಿಕ್ಷಕರ ಸದನದಲ್ಲಿ ಸೋಮವಾರ ನಡೆದ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತರ ಬಗ್ಗೆ ನನಗೆ ಅಪಾರ ಹೆಮ್ಮೆ, ಗೌರವ ಇದೆ. ಎಲ್ಲಾ ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರದ ಜೊತೆ ಚರ್ಚಿಸಲು 3 ತಿಂಗಳಲ್ಲಿ ನಿಯೋಗವನ್ನು ತೆಗೆದುಕೊಂಡು ಹೋಗುತ್ತೇನೆ ಎಂದು ಹೇಳಿದರು.
ಕೋವಿಡ್ ಸಂದರ್ಭದಲ್ಲಿ ಜನರು ಹೊರಗೆ ಬರಲು ಭಯ ಪಡುವ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಜೊತೆ ಕೈಜೋಡಿಸಿ ನೀವು ಮಾಡಿರುವ ಕೆಲಸಗಳು ಗಮನಾರ್ಹವಾಗಿವೆ. ನಿಮ್ಮ ಶ್ರಮಕ್ಕೆ ತಕ್ಕ ಫಲವನ್ನು ನೀವು ಪಡೆದಿಲ್ಲ. ಆದರೆ, ನ್ಯಾಯಯುತ ಬೇಡಿಕೆಗಳನ್ನು ಪರಿಗಣಿಸಲಾಗುತ್ತದೆ ಎಂದರು.

Share News

About BigTv News

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *