Breaking News

ಹರಿಯಾಣದಲ್ಲಿ ಕಾಂಗ್ರೆಸ್‌‍ ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದ ಭೂಪಿಂದರ್ ಸಿಂಗ್ ಹೂಡಾ

ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆ ಫಲಿತಾಂಶ ಭಾರಿ ಕುತೂಹಲ ಕೆರಳಿಸಿದೆ, ಆರಂಭಿಕ ಟ್ರೆಂಡ್ ಪ್ರಕಾರ ಕಾಂಗ್ರೆಸ್ ಮುನ್ನಡೆ ಗಳಿಸಿತ್ತು ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮಯಾಚರಣೆ ಕೂಡ ಆರಂಭವಾಗಿತ್ತು. ಆದರೆ ಕೆಲವೇ ಹೊತ್ತಿನಲ್ಲಿ ಟ್ರೆಂಡ್ ಬದಲಾಗಿದ್ದು, ಬಿಜೆಪಿ ಮುನ್ನಡೆ ಗಳಿಸಿದೆ.
ಆ ಮೂಲಕ ಹಾವು ಏಣಿಯಾಟ ಮುಂದುವರಿದಿದೆ, ಚುನಾವಣಾ ಆಯೋಗದ ತಾಜಾ ವರದಿಯ ಪ್ರಕಾರ ಬಿಜೆಪಿ 46, ಕಾಂಗ್ರೆಸ್ 37 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಏತನ್ಮಧ್ಯೆ ಹರಿಯಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವ ವಿಶ್ವಾಸವನ್ನು ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ವ್ಯಕ್ತಪಡಿಸಿದ್ದಾರೆ. ಈಗಿನ ಟ್ರೆಂಡ್ ಪ್ರಕಾರ ಹರಿಯಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲಿದೆ. ಸಿಎಂ ಅಭ್ಯರ್ಥಿಯನ್ನು ಹೈಕಮಾಂಡ್ ನಿರ್ಧರಿಸಲಿದೆ. ಹರಿಯಾಣದಲ್ಲಿ ಕಾಂಗ್ರೆಸ್ ಅತ್ಯುತ್ತಮ ಸಾಧನೆಗೆ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಇತರೆ ನಾಯಕರು ಮತ್ತು ರಾಜ್ಯದ ಜನರಿಗೆ ಅಭಿನಂದನೆ ಸಲ್ಲಬೇಕು ಎಂದು ಹೇಳಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *