Breaking News

ಬಾಗಲಕೋಟೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಮಾರಾಟ: ನಾಲ್ವರ ನೋಂದಣಿ

ಬಾಗಲಕೋಟೆ: ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಮಾರಾಟಕ್ಕೆ ಕೇವಲ ನಾಲ್ವರು ರೈತರು ಹೆಸರು ನೋಂದಾಯಿಸಿದ್ದರೆ, ಸೂರ್ಯಕಾಂತಿ ಮಾರಾಟಕ್ಕೆ 254 ಮಂದಿ ರೈತರು ಹೆಸರು ನೋಂದಾಯಿಸಿದ್ದಾರೆ.
ಪ್ರತಿ ಎಕರೆಗೆ 3 ಕ್ವಿಂಟಲ್‍ನಂತೆ ಪ್ರತಿ ರೈತರಿಂದ ಗರಿಷ್ಟ 15 ಕ್ವಿಂಟಲ್ ಸೂರ್ಯಕಾಂತಿ, ಪ್ರತಿ ಎಕರೆಗೆ 2 ಕ್ವಿಂಟಲ್‌ನಂತೆ ಪ್ರತಿ ರೈತರಿಂದ 10 ಕ್ವಿಂಟಲ್‌ ಹೆಸರುಕಾಳು ಖರೀದಿ ಮಾಡಲು ಉದ್ದೇಶಿಸಲಾಗಿದೆ.
ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಪ್ರತಿ ಕ್ವಿಂಟಲ್‍ಗೆ ₹7,280 ಹಾಗೂ ಹೆಸರುಕಾಳನ್ನು ಪ್ರತಿ ಕ್ವಿಂಟಲ್‍ಗೆ ₹8,682 ರಂತೆ ಖರೀದಿ ಮಾಡಲಾಗುತ್ತಿದೆ.
ಹೆಸರುಕಾಳು ಖರೀದಿಯನ್ನು ವಿಳಂಬ ಮಾಡಿದ್ದರಿಂದ ಬಹುತೇಕ ರೈತರು ಮುಕ್ತ ಮಾರುಕಟ್ಟೆಯಲ್ಲಿಯೇ ಕಾಳನ್ನು ಮಾರಾಟ ಮಾಡಿದ್ದಾರೆ. ಹಾಗಾಗಿ, ಜಿಲ್ಲೆಯಲ್ಲಿ 30 ಸಾವಿರ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಹೆಸರು ಬೆಳೆಯಲಾಗಿದೆ. ನಿತ್ಯ ಬಾಗಲಕೋಟೆಯ ಕೃಷಿ ಉತ್ಪನ್ನ ಮಾರುಕಟ್ಟೆಗೆ ನೂರಾರು ಕ್ವಿಂಟಲ್ ಆವಕಾವಾಗುತ್ತಿದೆ. ಆದರೂ, ಕೇವಲ ಜಮಖಂಡಿಯಲ್ಲಿ ಮಾತ್ರ ನಾಲ್ವರು ರೈತರು ಹೆಸರು ನೋಂದಾಯಿಸಿದ್ದಾರೆ.
ಬಾಗಲಕೋಟೆ, ಬಾದಾಮಿ, ಹುನಗುಂದ, ಬೀಳಗಿ, ಮುಧೋಳ ತಾಲ್ಲೂಕಿನಲ್ಲಿ ಖರೀದಿ ಕೇಂದ್ರಗಳನ್ನು ತೆರೆದಿದ್ದರೂ, ಬಾದಾಮಿ, ಹುನಗುಂದ ತಾಲ್ಲೂಕಿನಲ್ಲಿ ಮಾತ್ರ ರೈತರು ಹೆಸರು ನೋಂದಾಯಿಸಿದ್ದಾರೆ. ಹುನಗುಂದದ ಟಿ.ಎ.ಪಿ.ಸಿ.ಎಂ.ಎಸ್‌ನಲ್ಲಿ 166, ಬಾದಾಮಿ ತಾಲ್ಲೂಕಿನ ಕಗಲಗೊಂಬ ಎಣ್ಣೆ ಬೀಜ ಬೆಳೆಗಾರರ ಸಹಕಾರಿ ಸಂಘದಲ್ಲಿ 71, ಕೆಂದೂರ ಕೇಂದ್ರದಲ್ಲಿ 17 ಮಂದಿ ರೈತರು ಒಟ್ಟು 2,258 ಕ್ವಿಂಟಲ್‌ ಮಾರಾಟ ಮಾಡಲು ಮುಂದಾಗಿದ್ದಾರೆ.
ಬಾಗಲಕೋಟೆ ತಾಲ್ಲೂಕಿನ ಖಜ್ಜಿಡೋಣಿ, ಬಾದಾಮಿ ತಾಲ್ಲೂಕಿನ ನಂದಿಕೇಶ್ವರ, ಹೆಬ್ಬಳ್ಳಿ, ಮುಧೋಳ ತಾಲ್ಲೂಕಿನ ಜುನ್ನೂರ ಎಣ್ಣೆ ಬೀಜ ಬೆಳೆಗಾರರ ಸಹಕಾರಿ ಸಂಘ, ಬೀಳಗಿ ತಾಲ್ಲೂಕಿನ ಸೊನ್ನ ಎಣ್ಣೆ ಬೀಜ ಬೆಳೆಗಾರರ ಸಹಕಾರಿ ಸಂಘದಲ್ಲಿ ಯಾರೂ ಹೆಸರು ನೋಂದಾಯಿಸಿಲ್ಲ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *